Mangalore : ಯುವತಿಯೊಬ್ಬಳು ತನ್ನ ಭಾವಿ ಪತಿಯೊಂದಿಗೆ ಬರ್ತ್ ಡೇ ಪಾರ್ಟಿಗೆ ತೆರಳಲು ಬೈಕಿನಲ್ಲಿ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದ್ದು, ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

Mangalore : ಮಂಗಳೂರಿನ ನಂತೂರು ವೃತ್ತದ ಬಳಿ ಖಾಸಗಿ ಬಸ್ಸುಗಳ ಅತಿವೇಗ, ನಿರ್ಲಕ್ಷ್ಯ ಚಾಲನೆಗೆ ಭೀಕರ ಅಪಘಾತ ಸಂಭವಿಸಿದ್ದು, ಬಳ್ಳಾಲ್ಬಾಗ್ ನಿವಾಸಿ ದೀಪ್ತಿ (26) ಎಂಬ ಯುವತಿ ಖಾಸಗಿ ಬಸ್ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಖಾಸಗಿ ಬಸ್ ಅತಿವೇಗಕ್ಕೆ ಯುವತಿ ಬಲಿ
ದೀಪ್ತಿ ತನ್ನ ಭಾವಿ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ವಾಮಂಜೂರಿಗೆ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ 22ನೇ ನಂಬರಿನ ಖಾಸಗಿ ಬಸ್, ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ನಿಂದ ಕೆಳಗೆ ಬಿದ್ದ ದೀಪ್ತಿ ಅವರ ಹೊಟ್ಟೆಯ ಮೇಲೆ ಬಸ್ಸಿನ ಚಕ್ರ ಹರಿದಿದೆ.

ಇದನ್ನೂ ಓದಿ : Jailನಲ್ಲಿ ಖೈದಿಗಳಿಗೆ ನೀಡುತ್ತಿದ್ದ ವಿಶೇಷ ಸೌಲಭ್ಯಕ್ಕೆ ಬ್ರೇಕ್.!
ಯುವತಿ ಸಾವಿನ ಬಳಿಕ ಸಾರ್ವಜನಿಕರ ಆಕ್ರೋಶ
ಕೂಡಲೇ ಗಂಭೀರ ಗಾಯಗೊಂಡಿದ್ದ ದೀಪ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಭಾವಿ ಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳೂರಿನಲ್ಲಿ ಖಾಸಗಿ ಬಸ್ ಚಾಲಕರ ನಿರ್ಲಕ್ಷ್ಯ ಚಾಲನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು. ಮೃತ ಯುವತಿಯ ಸಂಬಂಧಿಕರು ಹಾಗೂ ಗ್ರಾಮಸ್ಥರು ಮಂಗಳೂರಿನ ಕದ್ರಿ ಸಂಚಾರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಬಸ್ ಚಾಲಕನ ನಿರ್ಲಕ್ಷ್ಯವೇ ಈ ಸಾವಿಗೆ ನೇರ ಕಾರಣ ಎಂದು ಆರೋಪಿಸಿ ಪ್ರತಿಭಟನೆ ತೀವ್ರಗೊಂಡಿದ್ದು,ಸದ್ಯ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಪ್ರಯತ್ನಿಸಿದ್ದಾರೆ.
ಖಾಸಗಿ ಬಸ್ಸುಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಬೇಕು ಹಾಗೂ ಮೃತ ಯುವತಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸದ್ಯ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಿಸಿದ ಬಸ್ ಮತ್ತು ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭವಾಗಿದೆ.
MUST WATCH : CAR-LORRY ACCI*DENT | ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ACCI*DENT




