Chikkaballapura : ಚಿಂತಾಮಣಿ ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Chikkaballapura : ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲ್ಲೂಕಿನಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ 5 ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾಗಿದ್ದು, ಆಕೆಯ ಮೇಲೆ ಸೋದರ ಮಾವನೇ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪ ಕೇಳಿಬಂದಿದೆ.
ಚಿಂತಾಮಣಿಯಲ್ಲಿ ಬೆಚ್ಚಿಬೀಳಿಸುವ ಘಟನೆ
ದಸರಾ ರಜೆಯ ವೇಳೆ ಊರಿಗೆ ತೆರಳಿದ್ದ ಸಂದರ್ಭದಲ್ಲಿ ಆರೋಪಿತ ಸೋದರ ಮಾವ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನಲಾಗಿದೆ.
ಈ ವಿಷಯ ಹಲವು ದಿನಗಳ ಕಾಲ ಯಾರಿಗೂ ತಿಳಿಯದೆ ಇದ್ದಿದ್ದು, ಹಾಸ್ಟೆಲ್ನಲ್ಲಿ ಇದ್ದ ಬಾಲಕಿಯಲ್ಲಿ ದೈಹಿಕ ಬದಲಾವಣೆ ಕಂಡುಬಂದ ನಂತರ ಹಾಸ್ಟೆಲ್ ವಾರ್ಡನ್ಗೆ ಅನುಮಾನ ಮೂಡಿದೆ.
10ನೇ ತರಗತಿ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿ
ವಾರ್ಡನ್ ಮಾಹಿತಿ ಮೇರೆಗೆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ, ಆಕೆ ಸುಮಾರು 5 ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಈ ಆಘಾತಕಾರಿ ವಿಚಾರ ಬೆಳಕಿಗೆ ಬಂದ ತಕ್ಷಣ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಎರಡು ದಿನಗಳಲ್ಲೇ 11 ಹಸುಗಳ ನಿಗೂಢ ಮರಣ, ರೈತರಲ್ಲಿ ಹೆಚ್ಚಿದ ಆತಂಕ.!

ಅಪ್ರಾಪ್ತ ಬಾಲಕಿಗೆ ಸೋದರ ಮಾವನಿಂದಲೇ ಲೈಂಗಿಕ ದೌರ್ಜನ್ಯ ಆರೋಪ
ವಿಷಯ ತಿಳಿಯುತ್ತಿದ್ದಂತೆಯೇ ಆರೋಪಿ ಸೋದರ ಮಾವ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಪ್ರಕರಣದ ಮಾಹಿತಿ ಪಡೆದು ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಬಾಲಕಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ.
ಶಿಕ್ಷಣಕ್ಕಾಗಿ ಚಿಂತಾಮಣಿ ತಾಲ್ಲೂಕಿಗೆ ಬಂದಿದ್ದ ಬಾಲಕಿಯ ಬದುಕು ಇಂತಹ ಕ್ರೂರ ಘಟನೆಯಿಂದ ಹಾಳಾಗಿರುವುದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರು ಆರೋಪಿತನನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
MUST WATCH : ಪದ್ಮಶ್ರೀ ಪುರಸ್ಕೃತೆಗೆ ಆಡಳಿತದಿಂದ ಅವಮಾನ..!?-




