ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಪ್ರಕರಣಗಳಿಗೆ ಕಡಿವಾಣ ಹಾಕಲು CID ಸೈಬರ್ ಕ್ರೈಂ ಮಹತ್ವದ ಕಾರ್ಯಾಚರಣೆ ನಡೆಸಿದೆ.

ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ, ಮ್ಯೂಲ್ ಅಕೌಂಟ್ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನು CID ಸೈಬರ್ ಕ್ರೈಂ ವಿಭಾಗ ಭೇದಿಸಿದೆ. ರಾಜ್ಯಾದ್ಯಂತ ಏಕಕಾಲಕ್ಕೆ ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಅಕ್ರಮಕ್ಕಾಗಿ ಬಳಸಲಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್ಗಳನ್ನು ಸಿಐಡಿ ತಂಡ ಪತ್ತೆ ಹಚ್ಚಿದೆ.
100ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ
ಸಿಐಡಿ ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳ 100ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಇಂದು ಈ ಜಾಲದ ಪ್ರಮುಖ 13 ಮಂದಿ ಮಾಸ್ಟರ್ ಮೈಂಡ್ಗಳನ್ನು ಬಂಧಿಸಿದ್ದಾರೆ. ಈ ದಂಧೆಯಲ್ಲಿ ಅಮಾಯಕ ಜನರ ಬ್ಯಾಂಕ್ ಖಾತೆಗಳು, ATM CARD ಗಳು ಹಾಗೂ ಖಾತೆ ವಿವರಗಳನ್ನು ಹಣದ ಆಮಿಷ ನೀಡಿ ಸಂಗ್ರಹಿಸಿ, ಸೈಬರ್ ವಂಚಕರಿಗೆ ಒದಗಿಸಲಾಗುತ್ತಿತ್ತು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇದನ್ನು ಓದಿ : ಜನ ಸಾಮಾನ್ಯರಿಗೆ ಮತ್ತೆ ದರ ಏರಿಕೆ ಶಾಕ್! ವಿದ್ಯುತ್ ಹಾಗೂ ನೀರಿನ ಬೆಲೆ ಹೆಚ್ಚಳ?

ಮ್ಯೂಲ್ ಅಕೌಂಟ್ ಮೂಲಕ ಹಣ ವಂಚನೆ
ಇನ್ನು ಸಂಗ್ರಹಿಸಲಾದ ಈ ಮ್ಯೂಲ್ ಅಕೌಂಟ್ಗಳನ್ನು ಬಳಸಿ ಆನ್ಲೈನ್ ವಂಚನೆ ನಡೆಸಲಾಗುತ್ತಿತ್ತು. ವಂಚನೆಯ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡುವುದು ಹಾಗೂ ಎಟಿಎಂ ಮೂಲಕ ಹಣ ವಿತ್ಡ್ರಾ ಮಾಡುವ ಕಾರ್ಯ ನಡೆಯುತ್ತಿತ್ತು ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.
ಅಮಾಯಕರಿಗೆ ವಂಚನೆಯ ಅರಿವೇ ಇರಲಿಲ್ಲ
ಖಾತೆ ವಿವರಗಳನ್ನು ನೀಡಿದ್ದ ಬಹುತೇಕ ಅಮಾಯಕ ಜನರಿಗೆ ತಮ್ಮ ಖಾತೆಗಳನ್ನು ಸೈಬರ್ ವಂಚನೆಗೆ ಬಳಸಲಾಗುತ್ತಿದೆ ಎಂಬ ಮಾಹಿತಿ ಇರಲಿಲ್ಲ ಎಂಬುದು ತನಿಖೆಯಿಂದ ತಿಳಿದು ಬಂದಿದೆ.
ಇದುವರೆಗೆ ನಡೆಸಿದ ತನಿಖೆಯಲ್ಲಿ ಸುಮಾರು 42 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್ಗಳು ಬಳಕೆಯಲ್ಲಿದ್ದವು ಎಂಬುದು ಪತ್ತೆಯಾಗಿದೆ.
ತನಿಖೆ ಮುಂದುವರಿಕೆ
ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆ ಮ್ಯೂಲ್ ಅಕೌಂಟ್ಗಳ ವಿರುದ್ಧ ಸಿಐಡಿ ತಂಡ ತೀವ್ರ ನಿಗಾ ವಹಿಸಿತ್ತು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

ಇದನ್ನು ನೋಡಿ : ನಿಗೂಢವಾಗಿ ಹಸುಗಳ ಸರಣಿ ಸಾ* – 2 ದಿನದಲ್ಲಿ 11 ಗೋವುಗಳ ದುರ್ಮರಣ




