Bellary : ಐತಿಹಾಸಿಕ ಆಂಜನೇಯ ದೇಗುಲದಲ್ಲಿ ಮಾಂಸದ ಮೂಳೆಗಳು ಪತ್ತೆಯಾಗಿವೆ.

Bellary ನಗರದ ನಾಗಲಕೇರಿಯಲ್ಲಿರುವ ಐತಿಹಾಸಿಕ ವೀರ ಬಾಲಾಂಜನೇಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಂಸದ ತುಂಡುಗಳು ಪತ್ತೆಯಾಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.
ದೇವಸ್ಥಾನದ ಆವರಣದಲ್ಲಿ ಮಾಂಸ ಪತ್ತೆ
ಇಂದು ಬೆಳಿಗ್ಗೆ 5:30 ರ ಸುಮಾರಿಗೆ ದೇವಸ್ಥಾನಕ್ಕೆ ಬಂದ ಅರ್ಚಕರು ಪ್ಲಾಸ್ಟಿಕ್ ಕವರ್ನಲ್ಲಿ ಮಾಂಸದ ತುಂಡುಗಳನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಭಕ್ತರು ದೇವಸ್ಥಾನದ ಬಳಿ ಜಮಾಯಿಸಿದ್ದು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು ಕೂಡ ಸ್ಥಳಕ್ಕೆ ಧಾವಿಸಿದ್ದಾರೆ.
ಇದನ್ನು ಓದಿ : Reels ರಾಣಿ ಸುಚಿತ್ರಾ–ಜ್ಯೋತಿಷಿ ಕಮಲಾಕರ್ ಭಟ್ ಪ್ರೇಮ ಪ್ರಕರಣಕ್ಕೆ ಟ್ವಿಸ್ಟ್.!
ದುಷ್ಕರ್ಮಿಗಳಿಂದ ಕೃತ್ಯ..?
ದೇವಸ್ಥಾನದ ಪ್ರಾಂಗಣದಲ್ಲಿ ಮಾಂಸ ಪತ್ತೆಯಾದ ಘಟನೆಯು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಮಾಡಿದೆ ಎಂದು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದಾರೆ. ಸ್ಥಳೀಯರು ಮತ್ತು ಹಿಂದೂ ಸಂಘಟನೆಗಳ ಮುಖಂಡರ ಪ್ರಕಾರ, ಇದು ಉದ್ದೇಶಪೂರ್ವಕವಾಗಿ ಅಶಾಂತಿ ಸೃಷ್ಟಿಸಲು ದುಷ್ಕರ್ಮಿಗಳು ನಡೆಸಿರುವ ಕೃತ್ಯವಾಗಿದೆ. ಪತ್ತೆಯಾದ ಮಾಂಸವು ಗೋಮಾಂಸದ ತುಂಡುಗಳೆಂದು ಹೇಳಲಾಗಿದೆ.

ಪೊಲೀಸರ ಪರಿಶೀಲನೆ ಮತ್ತು ದಾಳಿ
ಇನ್ನು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಪರಿಶೀಲನೆ ಹಾಗೂ ತನಿಖೆ ಪ್ರಾರಂಭಿಸಿದ್ದಾರೆ. ಹಿಂದೂ ಸಂಘಟನೆಗಳ ಮುಖಂಡರ ಪ್ರಕಾರ, ಬೀದಿ ನಾಯಿಗಳು ಅಥವಾ ಬೆಕ್ಕುಗಳು ಈ ಮಾಂಸದ ತುಂಡುಗಳನ್ನು ಸ್ವಚ್ಛವಾಗಿ ಪ್ಲಾಸ್ಟಿಕ್ ಕವರ್ನಲ್ಲಿ ತಂದು ಇರಿಸುವ ಸಾಧ್ಯವಿಲ್ಲ, ಇದು ಮನುಷ್ಯರಿಂದಲೇ ನಡೆಸಿದಕೃತ್ಯ ಎಂದು ಅವರು ಅಭಿಪ್ರಾಯಪಡುತ್ತಿದ್ದಾರೆ.
ಕಠಿಣ ಕ್ರಮಕ್ಕೆ ಆಗ್ರಹ
ಸಂಘಟನೆಗಳು ಪೊಲೀಸರು 24 ಗಂಟೆಗಳಲ್ಲಿ ತನಿಖೆ ಪೂರ್ಣಗೊಳಿಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿವೆ. ಇನ್ನು ಕೆಲ ಸ್ಥಳಿಯರು ಈ ಮಾಂಸವನ್ನು ನಾಯಿ ಅಥವಾ ಬೆಕ್ಕು ತಂದು ಹಾಕಿರಬಹುದು. ಈ ಬಗ್ಗೆ ಸೂಕ್ತ ತನಿಖೆ ಆಗಲಿ ಎಂದು ಆಗ್ರಹಿಸಿದ್ದಾರೆ.
ಇದನ್ನು ನೋಡಿ : ಎನಮರೇಪಲ್ಲಿಯಲ್ಲಿ ಅಪರಿಚಿತ ಶ ಪತ್ತೆ ಶ ಕಂಡು ಬೆಚ್ಚಿಬಿದ್ದ ಕುರಿಗಾಹಿಗಳು




