ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಮಾಜಿ ರೌಡಿಶೀಟರ್ Yashaswini Gowda ಬಂಧನ.

ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ (47) ಅವರನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಹಿನ್ನೆಲೆ
ಉದ್ಯಮಿ ಮನೋಜ್ ಕುಮಾರ್ ಅವರಿಗೆ ಪರಿಚಿತನಾಗಿದ್ದ ರಾಜೇಶ್, ಖ್ಯಾತ ಸಿನಿಮಾ ನಿರ್ದೇಶಕರೊಬ್ಬರಿಗರ 1.20 ಲಕ್ಷ ರೂಪಾಯಿ ಸಾಲ ಕೊಡಿಸಿದ್ದ.
ಆದರೆ ಒಂದು ವರ್ಷ ಕಳೆದರೂ ಹಣವನ್ನು ಹಿಂತಿರುಗಿಸದ ಕಾರಣ ಮನೋಜ್ ಕುಮಾರ್ ಒತ್ತಡ ಹೇರಿದ್ರು.
ಆಗಸ್ಟ್ 26ರಂದು ಸಂಜೆ 6.30ಕ್ಕೆ ಹಣ ಕೊಡುವುದಾಗಿ ರಾಜಾಜಿನಗರದ ಮೋದಿ ಆಸ್ಪತ್ರೆ ಸರ್ಕಲ್ಗೆ ಮನೋಜ್ ಕುಮಾರ್ ಅವರನ್ನು ರಾಜೇಶ್ ಕರೆಸಿಕೊಂಡಿದ್ದ.
ಬಳಿಕ ದೊಡ್ಡವರು ಹಣ ಕೊಡುತ್ತಾರೆ ಎಂದು ಕಾರಿಗೆ ಕೂರಿಸಿಕೊಂಡು ಕರೆದುಕೊಂಡು ಹೋಗಿದ್ದ. ಮಾರ್ಗ ಮಧ್ಯೆ ಮನೋಜ್ ಕುಮಾರ್ ಅವರನ್ನು ಮತ್ತೊಂದು ಕಾರಿನಲ್ಲಿ ಕೂರಿಸಿಕೊಂಡು ಆರೋಪಿಗಳು ಅಪಹರಿಸಿದ್ದರು.

ಇದನ್ನು ಓದಿ : ಆಂಜನೇಯ ದೇವಸ್ಥಾನದಲ್ಲಿ ಮಾಂಸದ ಮೂಳೆ ಪತ್ತೆ!
ಅಪಹರಣದ ವಿವರ
ಅಪಹರಣದ ವೇಳೆ ಆರೋಪಿಗಳು ಮನೋಜ್ ಕುಮಾರ್ ಅವರನ್ನು ನಗರದಲ್ಲಿ ವಿವಿಧೆಡೆ ಸುತ್ತಾಡಿಸಿ ಡ್ಯಾಗರ್ ತೋರಿಸಿ ಬೆದರಿಸಿದ್ದು, ಅವರ ಎರಡು ಬ್ಯಾಂಕ್ ಖಾತೆಗಳಿಂದ ಒಟ್ಟು 2.96 ಲಕ್ಷ ರೂ. ವರ್ಗಾಯಿಸಿದ್ದರು.
ನಂತರ 10 ಲಕ್ಷ ರೂ. ನೀಡುವಂತೆ ಬೆದರಿಸಿದ್ದರೂ, ಮನೋಜ್ ಕುಮಾರ್ ಹಣ ನೀಡುವುದಾಗಿ ಒಪ್ಪಿಕೊಂಡ ಬಳಿಕ ಮಾರನೇ ದಿನ ಮಧ್ಯಾಹ್ನ ಅವರನ್ನ ಜ್ಞಾನಭಾರತಿ ಕ್ಯಾಂಪಸ್ ಬಳಿ ಕಾರಿನಿಂದ ಇಳಿಸಿ ಹೊರಟು ಹೋಗಿದ್ದಾರೆ ಎಂದು ಮನೋಜ್ ಕುಮಾರ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು.
CCB ತನಿಖೆ ಮತ್ತು ಬಂಧನಗಳು
ಇನ್ನು ಕಳೆದ ಆಗಸ್ಟ್ನಲ್ಲಿ ರಾಜೇಶ್, ಸೀನಾ ಅಲಿಯಾಸ್ ಬಾಂಬೆ ಸೀನಾ, ಲೋಕೇಶ್ ಕುಮಾರ್, ನವೀನ್ ಕುಮಾರ್, ಸೋಮಯ್ಯ ಮತ್ತು ಯುಕೇಶ್ ಎಂಬ ಆರೋಪಿಗಳನ್ನು ಸಿಸಿಬಿ ಬಂಧಿಸಿದ್ದರು.
ತನಿಖೆಯಲ್ಲಿ ರೌಡಿಶೀಟರ್ ಬೇಕರಿ ರಘು ಕೈವಾಡದ ಭಾಗವಾಗಿರುವುದು ಪತ್ತೆಯಾಗಿದ್ದು, ಆತನನ್ನು ಮಂಡ್ಯದಲ್ಲಿ ಬಂಧಿಸಲಾಗಿತ್ತು.
ಆಗ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ ಯಶಸ್ವಿನಿ ಗೌಡ ವಿರುದ್ಧ ಮಂಡ್ಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ನೋಡಿ : B N RAVIKUMAR | ಸದನದಲ್ಲಿ ನೀರಿನ ಬಗ್ಗೆ ಹೆಚ್ ಡಿಡಿ ಧ್ವನಿಜೆಡಿಎಸ್ ಶಾಸಕ ಏನಂದ್ರು




