Breaking News : ಇಸ್ಲಾಮಾಬಾದ್ದಲ್ಲಿ ಶುಕ್ರವಾರ ಪ್ರಾರ್ಥನೆ ನಡೆಯುತ್ತಿರುವಾಗ ಸ್ಫೋಟ ಸಂಭವಿಸಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, 20 ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

Breaking News : ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ತರ್ಲೈ ಪ್ರದೇಶದಲ್ಲಿರುವ ಶಿಯಾ ಸಮುದಾಯದ ಪ್ರಾರ್ಥನಾ ಕೇಂದ್ರವಾದ ಇಮಾಮ್ಬರ್ಗಾ ಕಸ್ರ್-ಎ-ಖದೀಜತುಲ್ ಕುಬ್ರಾದಲ್ಲಿ ಇಂದು ಮಧ್ಯಾಹ್ನ ಭೀಕರ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದೆ.
ಪ್ರಾರ್ಥನೆ ನಡೆಯುತ್ತಿದ್ದ ವೇಳೆ ನಡೆದ ಈ ದಾಳಿಯಲ್ಲಿ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿ ಪ್ರಕಾರ, ಮಧ್ಯಾಹ್ನದ ವೇಳೆಗೆ ಶಿಯಾ ಪ್ರಾರ್ಥನಾ ಸ್ಥಳದ ಮುಖ್ಯ ದ್ವಾರದಲ್ಲಿ ಆತ್ಮಾಹುತಿ ಬಾಂಬರ್ ಸ್ಫೋಟಕಗಳನ್ನು ಸ್ಫೋಟಿಸಿದ್ದಾನೆ.
ಸ್ಫೋಟದ ತೀವ್ರತೆಗೆ ಸ್ಥಳದಲ್ಲಿ ಭಾರೀ ಗದ್ದಲ ಉಂಟಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ (PIMS), ಪಾಲಿಕ್ಲಿನಿಕ್ ಸೇರಿದಂತೆ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಇದನ್ನೂ ಓದಿ : ಮನೆಯಲ್ಲೇ ಅಕ್ರಮ ಬಂದೂಕು ತಯಾರಿಸುತ್ತಿದ್ದ ವ್ಯಕ್ತಿ Arrest.!
ಸ್ಫೋಟದ ಬಳಿಕ ಇಸ್ಲಾಮಾಬಾದ್ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ನಗರಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ. ರಕ್ಷಣಾ ಹಾಗೂ ಕಾನೂನು ಜಾರಿ ಪಡೆಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಘಟನೆಯ ಕುರಿತು ತನಿಖೆ ಮುಂದುವರಿದಿದೆ.
ನ. 11, 2025 ರಂದು ಇಸ್ಲಾಮಾಬಾದ್ನ ಜಿ-11 ಪ್ರದೇಶದ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ಹೊರಭಾಗದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಮೂರು ತಿಂಗಳೊಳಗೆ ನಡೆದಿದೆ.
ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಫೋಟದ ಪರಿಣಾಮ ಹತ್ತಿರದ ಕಟ್ಟಡಗಳ ಕಿಟಕಿಗಳು ಒಡೆದು ಹೋಗಿರುವುದು ಹಾಗೂ ರಸ್ತೆಯುದ್ದಕ್ಕೂ ಭಗ್ನಾವಶೇಷಗಳು ಹರಡಿರುವುದು ಕಂಡುಬಂದಿದೆ.

ಇತ್ತೀಚಿನ ವರ್ಷಗಳಲ್ಲಿ ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪಾಕಿಸ್ತಾನದಲ್ಲಿ ನಿರಂತರವಾಗಿ ನಡೆಯುತ್ತಿರುವ ಈ ದಾಳಿಗಳು ದೇಶದ ಭದ್ರತಾ ಪರಿಸ್ಥಿತಿಗೆ ಗಂಭೀರ ಸವಾಲಾಗಿದೆ.
MUST WATCH : VIRAL AUDIO | ಶಿಕ್ಷಕನಿಗೆ ಕೈ ಮುಖಂಡನಿಂದ ಧಮ್ಕಿನಾಗೇಶ್ ರೆಡ್ಡಿ AUDIO VIRAL




