Yathindra ಸಿದ್ದರಾಮಯ್ಯ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯಂಗ್ಯ ಟಾಂಗ್ ನೀಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಕಾಂಗ್ರೆಸ್ ರಾಜಕೀಯದ ತಾಜಾ ಅಪ್ಡೇಟ್…

ರಾಜ್ಯ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದ್ದು, ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಹೆಚ್ಚಾಗಿವೆ. ಈ ನಡುವೆ Yathindra ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಹೇಳಿಕೆಗಳು ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿವೆ.
ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಏನು?
ಮೊದಲಿಗೆ, ಶುಕ್ರವಾರ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು, “ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ”
“ಈ ಬಗ್ಗೆ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ”ಎಂದು ಹೇಳಿದ್ದಾರೆ.
ಇದರಿಂದ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿದೆ.
ಇದನ್ನು ಓದಿ : ಬೆಂಗಳೂರಲ್ಲಿ ಮಾಜಿ ರೌಡಿಶೀಟರ್ Yashaswini Gowda ಅರೆಸ್ಟ್

ಡಿಕೆ ಶಿವಕುಮಾರ್ ತಿರುಗೇಟು
ಇದಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, “ಯತೀಂದ್ರ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗೀತು”
ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.
ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಈ ಹೇಳಿಕೆಯನ್ನು ಗೌರವದಿಂದ ಸ್ವೀಕರಿಸುತ್ತೇನೆ ಎಂದರು. ಜೊತೆಗೆ, ಈ ವಿಷಯದ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದರು.
ಇನ್ನು ಪುತ್ತೂರು ಕಾಂಗ್ರೆಸ್ ಕಚೇರಿ ಶಿಲಾನ್ಯಾಸದಲ್ಲಿ ಮುಸ್ಲಿಂ ಮುಖಂಡರ ಹೆಸರು ಕೈಬಿಟ್ಟ ವಿಚಾರವಾಗಿ ಕೇಳಿದ ಪ್ರಶ್ನೆಗೆ ಡಿಕೆಶಿ ಉತ್ತರಿಸಿದರು.
“ಕಾಂಗ್ರೆಸ್ ಜಾತಿ ಮೇಲೆ ಅಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತದೆ” “ನಮಗೆ ಎಲ್ಲಾ ಜಾತಿ, ಧರ್ಮಗಳೂ ಅಗತ್ಯ” “ರಾಜಕಾರಣದಲ್ಲಿ ಧರ್ಮ ಬೇಕು, ಆದರೆ ಧರ್ಮದಲ್ಲಿ ರಾಜಕಾರಣ ಇರಬಾರದು”
ಎಂದು ಹೇಳಿದ್ದಾರೆ.
ಇದನ್ನು ನೋಡಿ : VIRAL AUDIO | ಶಿಕ್ಷಕನಿಗೆ ಕೈ ಮುಖಂಡನಿಂದ ಧಮ್ಕಿನಾಗೇಶ್ ರೆಡ್ಡಿ AUDIO VIRAL




