Breaking News : ತುಮಕೂರಿನ ಹೆತ್ತೇನಹಳ್ಳಿ ಮಾರಮ್ಮ ದೇವಾಲಯದಲ್ಲಿ ತಡರಾತ್ರಿ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ.

Breaking News : ತುಮಕೂರು ತಾಲ್ಲೂಕಿನ ಹೆತ್ತೆನಹಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ಖದೀಮರು ನುಗ್ಗಿ ದೇವಾಲಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ.
ಹೆತ್ತೆನಹಳ್ಳಿ ಮಾರಮ್ಮ ದೇವಸ್ಥಾನದಲ್ಲಿ ಕಳ್ಳತನ
ತಡರಾತ್ರಿ ದೇವಾಲಯದ ಬೀಗವನ್ನು ಹೊಡೆದು ಒಳನುಗ್ಗಿದ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಅಲ್ಲದೇ ದೇವರ ಮೂರ್ತಿಗೆ ಅಲಂಕರಿಸಿದ್ದ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ.
ಅಲ್ಲದೇ, ಮುಂದಿನ ವಾರದಿಂದ ಹೆತ್ತೇನಹಳ್ಳಿಯಲ್ಲಿ ಜಾತ್ರಾ ಮಹೋತ್ಸವ ಆರಂಭವಾಗಲಿದ್ದು, ಇದೀಗ ದೇವಸ್ಥಾನದ ಚಿನ್ನಾಭರಣ ಕಳ್ಳತನವಾಗಿದ್ದು, ಸ್ಥಳೀಯರು ಮತ್ತು ಭಕ್ತರಲ್ಲಿ ಆತಂಕ ಮನೆ ಮಾಡಿದೆ.
ಇದನ್ನೂ ಓದಿ : ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ಬಾಂಬ್ ದಾಳಿ..!

ದೇವಸ್ಥಾನದ ಸಿಸಿಟಿವಿ ಧ್ವಂಸ, ಖದೀಮರ ಅಟ್ಟಹಾಸ
ಕಳ್ಳತನದ ಸುಳಿವು ಸಿಗಬಾರದೆಂದು ದೇವಸ್ಥಾನದಲ್ಲಿದ್ದ ಸಿಸಿಟಿವಿ ಕ್ಯಾಮರಾವನ್ನೂ ನಾಶಪಡಿಸಿದ್ದಾರೆ. ಅಲ್ಲದೇ ಮಾರಮ್ಮ ದೇವಸ್ಥಾನದ ಹಿಂಭಾಗದಲ್ಲಿರುವ ಶ್ರೀ ರಾಮ ದೇವಸ್ಥಾನದಲ್ಲಿಯೂ ಕಳ್ಳತನಕ್ಕೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಅಲ್ದೇ ದೇವಸ್ಥಾನದ ಬೀಗವನ್ನು ಹೊಡೆದು ಹಾಕಿದ್ದಾರೆ.
ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರ ಭೇಟಿ
ಇಂದು ಬೆಳಿಗ್ಗೆ ದೇವಾಲಯಕ್ಕೆ ಆಗಮಿಸಿದ ಗ್ರಾಮಸ್ಥರು ಈ ಕೃತ್ಯವನ್ನು ಗಮನಿಸಿದ ಬಳಿಕ ವಿಷಯ ಬೆಳಕಿಗೆ ಬಂದಿದೆ. ಇನ್ನು ಮಾಹಿತಿ ತಿಳಿದ ಕೂಡಲೇ ತುಮಕೂರು ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
MUST WATCH : SIRA | ಫ್ಲೆಕ್ಸ್, ಬ್ಯಾನರ್ಗೆ ಕಡಿವಾಣ ಹಾಕಿ ಶಿರಾ ನಗರಸಭೆಗೆ ಕನ್ನಡ ಸೇನೆ ಮನವಿ




