Bengaluru ವಿಮಾನ ನಿಲ್ದಾಣದಲ್ಲಿ ₹1.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋಪೋನಿಕ್ ಗಾಂಜಾ ವಶ.

Bengaluru ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಕೋಟಿ ಕೋಟಿ ರೂಪಾಯಿ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಕೋಟಿ ಕೋಟಿ ಮೌಲ್ಯದ ಗಾಂಜಾ ವಶ
ಮೊದಲ ಪ್ರಕರಣದಲ್ಲಿ ಮಲೇಶಿಯಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕ ನೊಬ್ಬನನ್ನು ಪರಿಶೀಲನೆಗೆ ಒಳಪಡಿಸಿದ ವೇಳೆ, ಅವನ ಬಳಿ 5.48 ಕೆ.ಜಿ ಗಾಂಜಾ ಪತ್ತೆಯಾಗಿದೆ. ಇದರ ಅಂದಾಜು ಮೌಲ್ಯ ಸುಮಾರು 1 ಕೋಟಿ 91 ಲಕ್ಷ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ : ತುಮಕೂರಿನ ಒಂದೇ ಕುಟುಂಬದ ನಾಲ್ವರು ಬಿಹಾರದಲ್ಲಿ ಶವವಾಗಿ ಪತ್ತೆ.!

3.03 ಕೆ.ಜಿ ಹೈಡ್ರೋಫೋನಿಕ್ ಗಾಂಜಾ ವಶ
ಇನ್ನೊಂದು ಪ್ರಕರಣದಲ್ಲಿ ಪುಕೇಟ್ನಿಂದ ಬಂದ ಇಬ್ಬರು ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ, ಅವರಿಂದ 3.03 ಕೆ.ಜಿ ಹೈಡ್ರೋಫೋನಿಕ್ ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಮಾದಕ ವಸ್ತುವಿನ ಮೌಲ್ಯ ಸುಮಾರು 1 ಕೋಟಿ 6 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ತನಿಖೆ ಆರಂಭ
ಈ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಮೂವರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು, ಮಾದಕ ವಸ್ತುಗಳ ಸಾಗಣೆಯ ಕುರಿತು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

ಇದನ್ನು ನೋಡಿ : ವಿನಃಕಾರಣ ವಿಪಕ್ಷದವರು ನನ್ನ ಕೆಣಕಿದ್ರು ಅದಕ್ಕೆ ಕೋಪ ಬಂದು ಎಲ್ರಿಗು ಬೈದೆ




