Haveri : ಬೀದಿ ನಾಯಿಗಳ ಹಾವಳಿಗೆ ಬೆಚ್ಚಿದ ರಾಣೇಬೆನ್ನೂರು – ಒಂದೇ ದಿನ 23ಕ್ಕೂ ಹೆಚ್ಚು ಜನರ ಮೇಲೆ ದಾಳಿ.

Haveri ಜಿಲ್ಲೆಯ ರಾಣೇಬೆನ್ನೂರು ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದ್ದು, ಒಂದೇ ದಿನದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 23 ಕ್ಕೂ ಹೆಚ್ಚು ಜನರ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ರಾಣೇಬೆನ್ನೂರಿನ ಜನತೆ ಬೆಚ್ಚಿಬಿದ್ದಿದ್ದಾರೆ.
ಒಂದೇ ದಿನ 23ಕ್ಕೂ ಹೆಚ್ಚು ಜನರ ಮೇಲೆ ದಾಳಿ
ಕಳೆದ ಕೆಲ ದಿನಗಳಿಂದ ರಾಣೇಬೆನ್ನೂರು ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಹಲವು ಬಾರಿ ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ, ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಪರಿಣಾಮ ಒಂದೇ ದಿನ ಮಹಿಳೆಯರು, ಮಕ್ಕಳು ಸೇರಿದಂತೆ 23 ಕ್ಕೂ ಹೆಚ್ಚು ಜನರ ಮೇಲೆ ಬೀದಿನಾಯಿಗಳು ಸರಣಿ ದಾಳಿ ನಡೆಸಿದ್ದು, ನಾಯಿ ಕಡಿತಕ್ಕೆ ಒಳಗಾದವರನ್ನು ಕೂಡಲೇ ರಾಣೇಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಇದನ್ನು ಓದಿ : ಕೇಂದ್ರದಿಂದ ಪತ್ರ ಬಾರದೇ ಇದ್ದರೆ Metro ದರ ಏರಿಕೆ ಫಿಕ್ಸ್
ಬಾಲಕನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ – Haveri
ಇನ್ನು ಮನೆಯಿಂದ ಹೊರಗೆ ನಿಂತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿ ನಡು ರಸ್ತೆಯಲ್ಲಿಯೇ ಮನಸೋಇಚ್ಚೆ ಎಳೆದಾಡಿ ಭೀಕರ ದಾಳಿ ನಡೆಸಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನು ನಾಯಿ ದಾಳಿ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೀದಿನಾಯಿಗಳ ದಾಳಿಯಿಂದ ರಾಣೇಬೆನ್ನೂರಿನ ಜನತೆ ಭಯಭೀತರಾಗಿದ್ದು, ಮನೆಯಿಂದ ಹೊರಗೆ ಬರಲು ಕೂಡ ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ನಾಯಿಗಳನ್ನು ಸೆರೆಹಿಡಿಯಲು ಕಾರ್ಯಾಚರಣೆ
ಈ ಘಟನೆಯ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಜನರ ಮೇಲೆ ದಾಳಿ ನಡೆಸುತ್ತಿರುವ ಬೀದಿನಾಯಿಗಳನ್ನ ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಆದ್ರೆ ಈ ಸಮಸ್ಯೆಗೆ ಶಾಶ್ವತ ಪರಿಹಾರಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನು ನೋಡಿ : ವಿನಃಕಾರಣ ವಿಪಕ್ಷದವರು ನನ್ನ ಕೆಣಕಿದ್ರು ಅದಕ್ಕೆ ಕೋಪ ಬಂದು ಎಲ್ರಿಗು ಬೈದೆ




