Tipaturu : ತಿಪಟೂರು ತಾಲೂಕಿನಲ್ಲಿ ಕಳೆದ ಕೆಲ ತಿಂಗಳಿನಿಂದ ಜನರ ನಿದ್ರೆಗೆಡಿಸಿದ್ದ ಖತರ್ನಾಕ್ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.

Tipaturu : ತಿಪಟೂರು ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಚಿರತೆ ಕಾಟ ವಿಪರೀತವಾಗ್ತಾ ಇದ್ದು, ಜನರ ನಿದ್ದೆಗೆಡಿಸಿವೆ. ತಿಪಟೂರು ತಾಲೂಕಿನ ದಾಸೀಹಳ್ಳಿ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು.
ಇತ್ತ ಕೆಲವೊಮ್ಮೆ ಗ್ರಾಮಗಳಿಗೆ ನುಗ್ಗಿ ಸಾಕು ಪ್ರಾಣಿಗಳನ್ನ ಕೊಂದು ಹಾಕುತ್ತಿತ್ತು. ಇದೀಗ ಸುತ್ತಮುತ್ತಲ ಗ್ರಾಮಗಳಲ್ಲಿ ಗ್ರಾಮಸ್ಥರ ನಿದ್ರೆ ಕೆಡಿಸುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.
ಹೌದು, ತಿಪಟೂರು ತಾಲೂಕಿನ ದಾಸೀಹಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಚಿರತೆ ಅಗಾಗ ಪ್ರತ್ಯಕ್ಷವಾಗ್ತಾ ಇದ್ದು, ಕಳೆದ ಎರಡು ದಿನಗಳ ಹಿಂದಷ್ಟೇ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ, ಹಸುವನ್ನ ಕೊಂದು ಹಾಕಿತ್ತು.
ಇದನ್ನೂ ಓದಿ : ತುಮಕೂರಿನಲ್ಲಿ ಚಿರತೆ ಪ್ರತ್ಯಕ್ಷ.. ತೆಂಗಿನ ಮರ ಏರಿ ಕುಳಿತ ಚಿರತೆ.!
ಇದರಿಂದ ಗ್ರಾಮಸ್ಥರು ತಮ್ಮ ಜಮೀನುಗಳಿಗೆ ತೆರಳಲು ಭಯಬೀತರಾಗಿದ್ದು, ಇದಕ್ಕೆ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಗೆ ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು.
ಇನ್ನು ಗ್ರಾಮಸ್ಥರ ಮನವಿಗೆ ಎಚ್ಚೆತ್ತ ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮದ ಹಳ್ಳವೊಂದರಲ್ಲಿ ಬೋನು ಇರಿಸಿದ್ದರು. ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಗಂಡು ಚಿರತೆ ಸಿಕ್ಕಿಬಿದ್ದಿದ್ದು, ಇತ್ತ ಚಿರತೆ ಕಂಡು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಇನ್ನು ಸೆರೆಸಿಕ್ಕ ಚಿರತೆಯನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಸುರಕ್ಷಿತವಾಗಿ ಹಾಲ್ಕುರಿಕೆ ಸಸ್ಯ ಕ್ಷೇತ್ರಕ್ಕೆ ಸ್ಥಳಾಂತರ ಮಾಡಿದ್ದಾರೆ.
MUST WATCH : ಅರಣ್ಯ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ




