Chamarajanagara : ಗಡಿ ಗ್ರಾಮವಾದ ತಮಿಳುನಾಡಿನ ಕರಳವಾಡಿಯಲ್ಲಿ, 9 ಕಾಡಾನೆ ಹಿಂಡಿನ ದಾಳಿಗೆ ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

Chamarajanagara : ಚಾಮರಾಜನಗರ ಗಡಿ ಗ್ರಾಮವಾದ ತಮಿಳುನಾಡಿನ ಕರಳವಾಡಿ ಗ್ರಾಮದಲ್ಲಿ 9 ಕಾಡಾನೆಗಳ ಹಿಂಡು ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕರಳವಾಡಿ ಗ್ರಾಮದ ನಿವಾಸಿ ಮಹೇಶ್ ಮೃತ ದುರ್ದೈವಿ.
ರೈತ ಮಹೇಶ್ ತಮ್ಮ ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ವೇಳೆ ಏಕಾಏಕಿ 9 ಕಾಡಾನೆಗಳ ಹಿಂಡು ದಾಳಿ ಮಾಡಿದೆ. ಈ ವೇಳೆ ಅಕ್ಕಪಕ್ಕದ ಜಮೀನಿನವರು ಕೂಗಾಡಿದರೂ ಕಾಡಾನೆಗಳ ಹಿಂಡು ಹಿಂದಕ್ಕೆ ಸರಿಯದೆ ಮಹೇಶ್ ಮೇಲೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಳೆದ ಮೂರು–ನಾಲ್ಕು ತಿಂಗಳಿಂದ ಈ ಭಾಗದಲ್ಲಿ ಕಾಡಾನೆಗಳ ಹಿಂಡುಗಳ ಓಡಾಟ ಹೆಚ್ಚಾಗಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಇದೀಗ ರೈತನ ಸಾವಿನ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಜನರ ನಿದ್ರೆ ಗೆಡಿಸಿದ್ದ ಚಿರತೆ ಕೊನೆಗೂ ಸೆರೆ..!

ಇದಕ್ಕೂ ಮುನ್ನ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಜಲ್ಲಿಪಾಳ್ಯ ಸಮೀಪವೂ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿತ್ತು.
ತಮಿಳುನಾಡಿನ ಮಾಕಪಾಳ್ಯ ಗ್ರಾಮದ ನಿವಾಸಿ ಶಿವಮೂರ್ತಿ ಕೂಲಿ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಅರಣ್ಯ ರಸ್ತೆಯಲ್ಲಿ ಸಾಗುತ್ತಿದ್ದಾಗ ಕಾಡಾನೆಗಳ ಹಿಂಡು ಅಡ್ಡ ಬಂದಿತ್ತು.
ಹೂಗ್ಯಂ ವಲಯದ ಜಲ್ಲಿಪಾಳ್ಯ ಭಾಗದಲ್ಲಿ ಏಕಾಏಕಿ ಆನೆಗಳು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಶಿವಮೂರ್ತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದರು.
ಈ ಭಾಗದಲ್ಲಿ ಕಾಡಾನೆಗಳ ಓಡಾಟ ಹೆಚ್ಚಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದ್ದು, ಅರಣ್ಯ ಮಾರ್ಗಗಳಲ್ಲಿ ಸಂಚರಿಸುವ ವೇಳೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
MUST WATCH : ಮಿತಿಮೀರಿದ DEADLY DOGS ATTACK – ಒಂದೇ ದಿನ 23 ಜನರ ಮೇಲೆ ದಾಳಿ




