Nelamangala : ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು.

ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ Nelamangala ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.
ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋಗಿ ಮಹಿಳೆ ಸಾವು
ಮೃತಪಟ್ಟ ಮಹಿಳೆಯನ್ನು ಜ್ಯೋತಿ (45) ಎಂದು ಗುರುತಿಸಲಾಗಿದೆ. ಜ್ಯೋತಿ ಬೆಳಗ್ಗೆ ಎದ್ದು ಮನೆಯ ಮುಂದೆ ಕಸ ಗುಡಿಸುವ ವೇಳೆ ಬೈಕ್ನಲ್ಲಿ ಬಂದ ಕಳ್ಳರು ಮಹಿಳೆಗೆ ಸ್ಪ್ರೇ ಸಿಂಪಡಿಸಿ ಆಕೆಯ ಕೊರಳಲ್ಲಿದ್ದ 70 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿ ಯಾಗಿದ್ದಾರೆ. ಸ್ಪ್ರೇ ಸಿಂಪಡಿಸಿದ ಪರಿಣಾಮ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಇದನ್ನು ಓದಿ : Dina Bhavishya|ದಿನ ಭವಿಷ್ಯ 9 ಫೆಬ್ರವರಿ 2026

ಚಿಕಿತ್ಸೆ ಫಲಿಸದೇ ಸಾವು
ತಕ್ಷಣವೇ ಸ್ಥಳೀಯರು ಜ್ಯೋತಿಯನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಕರಣ ದಾಖಲು
ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನು ನೋಡಿ : CAR ACCI*DENT | TUMKUR ಹೊರವಲಯದ ಬಳಿ ಕಾರುಗಳ ನಡುವೆ ಸರಣಿ ಆಕ್ಸಿಡೆಂ*




