Kolar : ಬೊಲೆರೊ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿದರೆ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಡರಾತ್ರಿ ನಡೆದಿದೆ.

Kolar : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಡರಾತ್ರಿ ನಡೆದಿದೆ.
ಹುಣಸೇಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ಮುನಿಯಮ್ಮ, ವೆಂಕಟಪ್ಪ ಹಾಗೂ ಇನ್ನೊಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ತುಮಕೂರು ಬಳಿ ಸರಣಿ ಅಪಘಾತ.. ಇಬ್ಬರು ಸಾವು- ಹಲವರಿಗೆ ಗಂಭೀರ ಗಾಯ.!

ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆ ಹಾಗೂ ಆಂಧ್ರಪ್ರದೇಶದ ಮದನಪಲ್ಲಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ.
ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

MUST WATCH : TUMKUR ಹೊರವಲಯದ ಬಳಿ ಕಾರುಗಳ ನಡುವೆ ಸರಣಿ ಆಕ್ಸಿಡೆಂ* – ಓವರ್ ಟೇಕ್ ಮಾಡಲು ಹೋಗಿ ಅವಘಡ




