ಟಿ20 ವಿಶ್ವಕಪ್ನ ಆರಂಭದಲ್ಲೇ ವೆಸ್ಟ್ ಇಂಡೀಸ್ ದಾಂಡಿಗ Shimron hetmyer ಅಬ್ಬರಿಸಿದ್ದಾರೆ.

ಟಿ20 ವಿಶ್ವಕಪ್ನ ಆರಂಭದಲ್ಲೇ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಟ್ಮೆಯರ್ ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 15 ವರ್ಷಗಳ ಹಿಂದೆ ಕ್ರಿಸ್ ಗೇಲ್ ಬರೆದಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಅದು ಕೂಡ ಕೇವಲ 22 ಎಸೆತಗಳಲ್ಲಿ ಎಂಬುದು ವಿಶೇಷ.
22 ಎಸೆತಗಳಲ್ಲಿಅರ್ಧಶತಕ
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಿಮ್ರಾನ್ ಹೆಟ್ಮೆಯರ್, ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದು, 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.

ಇದನ್ನು ಓದಿ : ಬೊಲೆರೋ ವಾಹನ ಪಲ್ಟಿ – ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವು.!
ಗೇಲ್ ದಾಖಲೆ ಮುರಿದ Shimron Hetmyer
ಈ ಸ್ಫೋಟಕ ಇನಿಂಗ್ಸ್ ಮೂಲಕ ಟಿ20 ವಿಶ್ವಕಪ್ನಲ್ಲಿ ವೆಸ್ಟ್ ಇಂಡೀಸ್ ಪರ ಅತೀವೇಗದ ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ಹೆಟ್ಮೆಯರ್ ಪಾಲಾಗಿದೆ. ಇದುವರೆಗೆ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.
ಕೇವಲ 22 ಎಸೆತಗಳಲ್ಲಿ ಕ್ರಿಸ್ ಗೇಲ್ ದಾಖಲೆ ಉಡೀಸ್
2009ರಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕ್ರಿಸ್ ಗೇಲ್ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ದಾಖಲೆ ನಿರ್ಮಿಸಿದ್ದರು. ಇದೀಗ ಆ ದಾಖಲೆಯನ್ನು ಮುರಿದಿರುವ ಶಿಮ್ರಾನ್ ಹೆಟ್ಮೆಯರ್, ಟಿ20 ವಿಶ್ವಕಪ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ.

ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸುವ ಮೂಲಕ ಹೆಟ್ಮೆಯರ್, ಟಿ20 ವಿಶ್ವಕಪ್ನಲ್ಲಿಅತೀವೇಗದ ಅರ್ಧಶತಕ ಬಾರಿಸಿದ ಕೆರಿಬಿಯನ್ ದಾಂಡಿಗ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.
ಇದನ್ನು ನೋಡಿ : TUMAKURU | ತೆರಿಗೆದಾರರ ವಿರುದ್ಧ ಪಾಲಿಕೆ ಸಮರ ವಸೂಲಿಗೆ ಫೀಲ್ಡ್ ಗೆ ಇಳಿದ ಅಧಿಕಾರಿಗಳು

