Haveri News : ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇಟ್ಟಿದ್ದ ನಾಡ ಬಾಂಬ್ ಸ್ಫೋಟಿಸಿ ಎರಡು ಹೋರಿಗಳು ಮೃತಪಟ್ಟಿರುವ ಘಟನೆ ನಡೆದಿದೆ.

Haveri News : ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹೀರೂರು ಗ್ರಾಮದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡುವ ಉದ್ದೇಶದಿಂದ ಅಕ್ರಮವಾಗಿ ಇಟ್ಟಿದ್ದ ನಾಡ ಬಾಂಬ್ ಸ್ಫೋಟಗೊಂಡ ಪರಿಣಾಮ ಎರಡು ಹೋರಿಗಳು ಮೃತಪಟ್ಟಿರುವ ಘಟನೆ ನಡೆದಿದೆ.
ಹಾನಗಲ್ನಲ್ಲಿ ನಾಡ ಬಾಂಬ್ ಸ್ಫೋಟ
ಗ್ರಾಮದ ಹೊರವಲಯದ ಸಿಗಿಗುಂಡಿ ಪ್ರದೇಶದ ಕಾಡಿನಲ್ಲಿ ವನ್ಯಜೀವಿಗಳು ನೀರು ಕುಡಿಯಲೆಂದು ತೊಡಲಾಗಿದ್ದ ನೀರಿನ ಗುಂಡಿಯ ಬಳಿ ಯಾರೋ ಕಿಡಿಗೇಡಿಗಳು ನಾಡ ಬಾಂಬ್ ಇಟ್ಟಿದ್ದರು ಎನ್ನಲಾಗಿದೆ.
ನೀರು ಕುಡಿಯಲು ತೆರಳಿದ್ದ ಎರಡು ಹೋರಿಗಳು ನಾಡ ಬಾಂಬ್ ಅನ್ನು ಕಚ್ಚಿದ ಪರಿಣಾಮ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಹೋರಿಗಳ ಬಾಯಿ ಛಿದ್ರ-ಛಿದ್ರಗೊಂಡು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿವೆ.
ನಾಡ ಬಾಂಬ್ ಸ್ಫೋಟದಿಂದ ಎರಡು ಹೋರಿಗಳು ಸಾವು
ಮೃತ ಹೋರಿಗಳು ಹೀರೂರು ಗ್ರಾಮದ ರೈತ ಶೇಖಪ್ಪ ಮೇಳ್ಳಿಹಳ್ಳಿ ಅವರಿಗೆ ಸೇರಿದ್ದವು ಎಂದು ತಿಳಿದುಬಂದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಹೋರಿಗಳನ್ನು ಕಳೆದುಕೊಂಡ ರೈತ ಶೇಖಪ್ಪ ಅವರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ಬೊಲೆರೋ ವಾಹನ ಪಲ್ಟಿ.. ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವು.!
ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ಪರಿಶೀಲನೆ
ಇನ್ನು ಘಟನೆಯ ಮಾಹಿತಿ ತಿಳಿದ ತಕ್ಷಣ ಹಾನಗಲ್ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಡಿನ ನೀರಿನ ಗುಂಡಿಯ ಸುತ್ತಮುತ್ತ ಇನ್ನೂ ನಾಡ ಬಾಂಬ್ಗಳು ಇರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಸುದೀರ್ಘ ಪರಿಶೀಲನೆ ಕೈಗೊಂಡಿದ್ದಾರೆ.
ಸದ್ಯ ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ನಾಡ ಬಾಂಬ್ ಇಟ್ಟವರ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
MUST WATCH : ವಸಂತ ನರಸಾಪುರ ಬಳಿ ಮತ್ತೊಂದು ಅಗ್ನಿ ಅವಘಡ- ವೇಸ್ಟೇಜ್ ವೆಸ್ಟೇಜ್ ರಿಸೈಕಲಿಂಗ್ ಫ್ಯಾಕ್ಟರಿ ಧಗಧಗ




