Canada ದಲ್ಲಿ ಕನ್ನಡಿಗನ ಕಗ್ಗೊಲೆ! ಕಾರಿನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ.

Nelamanagala : ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲದ ವ್ಯಕ್ತಿಯ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ದ ನಂತರ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ವ್ಯಕ್ತಿಯ ಸಾವಿನಿಂದ ಕರ್ನಾಟಕದಲ್ಲಿ ನೆಲೆಸಿರುವ ಆತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಏಕಾಏಕಿ ನಡೆದ ಗುಂಡಿನ ದಾಳಿಗೆ ನಿಖರವಾದ ಕಾರಣವೇನು ಎಂದು ಸದ್ಯಕ್ಕೆ ತಿಳಿದು ಬಂದಿಲ್ಲ.
Canada ದಲ್ಲಿ ಕನ್ನಡಿಗನ ಕಗ್ಗೊಲೆ!
ಮೃತ ವ್ಯಕ್ತಿಯನ್ನು ಚಂದನ್ ಕುಮಾರ್ (37) ಎಂದು ಗುರುತಿಸಲಾಗಿದ್ದು, ಅವರು ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮದ ಮೂಲದವರಾಗಿದ್ದಾರೆ. ಕಳೆದ ಆರು ವರ್ಷಗಳಿಂದ Canadaದಲ್ಲಿ ನೆಲೆಸಿದ್ದ ಚಂದನ್, ಎಲ್ ಅಂಡ್ ಟಿ (L&T) ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನು ಓದಿ : ಬೊಲೆರೋ ವಾಹನ ಪಲ್ಟಿ.. ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವು.!

ಆಗಿದ್ದೇನು?
ನಿನ್ನೆ ಚಂದನ್ ಕುಮಾರ್ ಕೆನಡಾದ ವುಡ್ಬೈನ್ ಮಾಲ್ ಸಮೀಪ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ದುಷ್ಕರ್ಮಿಗಳು ಏಕಾಏಕಿ ಕಾರಿನ ಮೇಲೆ ಗುಂಡಿನ ದಳಿ ನಡೆಸಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಚಂದನ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುಂಡಿನ ದಾಳಿ ನೋಡಿದ ಸ್ಥಳೀಯ ಹೇಳಿದ್ದೇನು?
ಶೂಟೌಟ್ ನಡೆದ ಸಂದರ್ಭದಲ್ಲಿ ಅದನ್ನು ತನ್ನ ಕಣ್ಣಾರೆ ನೋಡಿದ ಸ್ಥಳೀಯರು ಗಾಬರಿಗೊಂಡಿದ್ದು, ತಾವು ನೋಡಿತ ಭೀಕರತೆಯನ್ನು ವಿವರಿಸಿದ್ದಾರೆ. ಮಾಲ್ ಹೊರಗೆ ತಮ್ಮ ಕಾರಿನಲ್ಲಿ ಕುಳಿತು ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಓರ್ವ ವ್ಯಕ್ತಿಗೆ 5-6 ಬಾರಿ ಗುಂಡು ಹಾರಿಸಿದ ಶಬ್ಧ ಕೇಳಿತ್ತಂತೆ. ಈ ವೇಳೆ ಕಾರಿನ ಕನ್ನಡಿಯ ಮೂಲಕ ನೋಡಿದಾಗ ವ್ಯಕ್ತಿಯೊಬ್ಬ ಗನ್ ಹಿಡಿದು ನಿಂತಿದ್ದೂ ಕಾಣಿಸಿತೆಂದು ಕೆನಡಾದ ಮಾಧ್ಯಮದ ಮುಂದೆ ಹೇಳಿಕೊಂಡಿ ದ್ದಾರೆ.

ಅಪ್ಪಟ ಕನ್ನಡಾಭಿಮಾನಿ
ಚಂದನ್ ಕುಮಾರ್ ತಂದೆ ನಂದಕುಮಾರ್ ಅವರು ನಿವೃತ್ತ ಶಿಕ್ಷಕರಾಗಿದ್ದು, ತಾಯಿ ಹಾಗೂ ಕುಟುಂಬದವರು ತ್ಯಾಮಗೊಂಡ್ಲು ಗ್ರಾಮದಲ್ಲೇ ವಾಸಿಸುತ್ತಿದ್ದಾರೆ. ಘಟನೆ ನಡೆದ ತಕ್ಷಣ ಕೆನಡಾದ ಪೊಲೀಸರು ಚಂದನ್ ಅವರ ತಂದೆಯನ್ನು ಸಂಪರ್ಕಿಸಿದ್ದಾರೆ. ಆದರೆ ಭಾಷಾ ಸಮಸ್ಯೆ ಕಾರಣವಾಗಿ ಭಾರತೀಯರೊಬ್ಬರ ಸಹಾಯದ ಮೂಲಕ ಈ ದುಃಖದ ಸುದ್ದಿ ಕುಟುಂಬಕ್ಕೆ ತಲುಪಿಸಲಾಗಿದೆ ಎಂದು ಸಂಬಂಧಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇದನ್ನು ನೋಡಿ : METRO ಪ್ರಯಾಣಿಕರಿಗೆ GOOD NEWS BMRCL ನಿರ್ಧಾರಕ್ಕೆ ಜನ ಪುಲ್ ಖುಷ್




