ಮನೆಯ ಮುಂದೆ ನಿಲ್ಲಿಸಿದ್ದ ಕಾರೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ Hassan ನಗರದಲ್ಲಿ ನಡೆದಿದೆ.

Hassan ಜಿಲ್ಲೆಯ ದೇವೇಗೌಡ ನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಬೆಳಿಗ್ಗೆ ಸುಮಾರು 11:30ರ ಸಮಯದಲ್ಲಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.
ಇದನ್ನು ಓದಿ : ಹೆಂಡತಿಗೆ ಬಾಸುಂಡೆ ಬರುವಂತೆ ಥಳಿಸಿದ ಕಿರಾತಕ ಗಂಡ
ಕಾರು ಸಂಪೂರ್ಣ ಸುಟ್ಟು ಕರಕಲು
ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ರು. ಅಲ್ದೇ ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಕಿ ಅಕ್ಕಪಕ್ಕದ ಮನೆಗಳಿಗೆ ಹರಡುವುದು ತಪ್ಪಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಅವಘಡ?
ಇನ್ನುಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆಯೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಇದನ್ನು ನೋಡಿ : SIDDAGANGA MATTAದಲ್ಲಿ ಜಾತ್ರೆ ಮೂಡ್..! – ಮೂಲೆ ಮೂಲೆಯಿಂದ ಬರ್ತಿದ್ದಾರೆ ಭಕ್ತರು




