Kantara Chapter 1 : ಥಿಯೇಟರ್, ಒಟಿಟಿ ಮಾತ್ರವಲ್ಲದೇ ಕಿರುತೆರೆಯಲ್ಲಿ ಕೂಡ ‘ಕಾಂತಾರ ಚಾಪ್ಟರ್ 1’ ಸಿನಿಮಾ ಅಬ್ಬರಿಸಿದ್ದು, ದಾಖಲೆ ಪ್ರಮಾಣದಲ್ಲಿ ಜನರು ವೀಕ್ಷಿಸಿದ್ದಾರೆ.

Kantara Chapter 1 : ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ‘ಕಾಂತಾರ ಚಾಪ್ಟರ್ 1’ ಚಿತ್ರಮಂದಿರ, OTT ಮಾತ್ರವಲ್ಲದೆ ಕಿರುತೆರೆಯಲ್ಲಿಯೂ ಹೊಸ ದಾಖಲೆ ಬರೆದಿದೆ.
ಹೊಂಬಾಳೆ ಫಿಲ್ಮ್ಸ್ಗೆ ಮತ್ತೊಂದು ಮೈಲಿಗಲ್ಲು
ಈ ಸಿನಿಮಾ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ‘ಜೀ ಕನ್ನಡ’ ವಾಹಿನಿಯಲ್ಲಿ ಪ್ರಸಾರವಾಗಿದ್ದು, ಅತ್ಯುತ್ತಮ TRP ಪಡೆದು ಬ್ಲಾಕ್ಬಸ್ಟರ್ ಆಗಿ ಹೊರಹೊಮ್ಮಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ.
2026ರ ಜ. 24ರಂದು ಸಂಜೆ 7 ಗಂಟೆಗೆ ‘ಜೀ ಕನ್ನಡ’ ವಾಹಿನಿಯಲ್ಲಿ ಪ್ರಸಾರವಾದ ‘ಕಾಂತಾರ 1’ ಸಿನಿಮಾ, ನಗರ ಹಾಗೂ ಗ್ರಾಮೀಣ ಪ್ರದೇಶಗಳನ್ನು ಸೇರಿಸಿ ಒಟ್ಟು 11.56 ಟಿವಿಆರ್ ದಾಖಲಿಸಿದೆ.
ನಗರ ಪ್ರದೇಶದಲ್ಲಿಯೇ 9.30 ಟಿವಿಆರ್ ಪಡೆಯುವ ಮೂಲಕ ಮನರಂಜನಾ ಕ್ಷೇತ್ರದಲ್ಲಿ ಅಪರೂಪದ ಸಾಧನೆ ಮಾಡಿದೆ. ಪ್ರೈಮ್–ಟೈಮ್ನಲ್ಲಿ ಕನ್ನಡ ಸಿನಿಮಾವೊಂದು ಈ ಮಟ್ಟದ ರೇಟಿಂಗ್ ಪಡೆಯುವುದು ವಿರಳ ಎನ್ನಲಾಗ್ತಿದೆ.

ಇದನ್ನೂ ಓದಿ : ಗೋವಾದಲ್ಲಿ ಹೈ–ಇಂಟೆನ್ಸಿಟಿ Racing ಕುರಿತು ಕಿಚ್ಚ Sudeep ಟಾಕ್.!
ಟಿವಿಯಲ್ಲಿ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’
2025ರ ಅಕ್ಟೋಬರ್ 2ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿಯೂ ಅಭೂತಪೂರ್ವ ಯಶಸ್ಸು ಕಂಡಿತ್ತು.
ರಿಷಬ್ ಶೆಟ್ಟಿ ಅವರ ಕಥೆ ಮತ್ತು ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರವನ್ನು ವಿಜಯ್ ಕಿರಗಂದೂರು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ನಲ್ಲಿ ನಿರ್ಮಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಎಸ್. ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕೆ ಮತ್ತಷ್ಟು ಬಲ ನೀಡಿವೆ.
ಟಿವಿಯಲ್ಲಿ ಸಿನಿಮಾ ವೀಕ್ಷಿಸಿದ ಪ್ರೇಕ್ಷಕರಿಂದಲೂ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಕುಟುಂಬ ಸಮೇತರಾಗಿ ನೋಡಬಹುದಾದ ಗಟ್ಟಿಯಾದ ಕಥಾಹಂದರವೇ ಈ ಯಶಸ್ಸಿಗೆ ಕಾರಣ ಎಂದು ಹೊಂಬಾಳೆ ಫಿಲ್ಮ್ಸ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಈ ದಾಖಲೆ ಯಶಸ್ಸಿನೊಂದಿಗೆ, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಮುಂದಿನ ಸಿನಿಮಾಗಳ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.
MUST WATCH : ಬೆಂಗಳೂರಲ್ಲಿ ಮತ್ತೆ RCB ಮ್ಯಾಚ್ ಭದ್ರತೆ ಬಗ್ಗೆ ಪರಮೇಶ್ವರ್ ಏನಂದ್ರು ಗೊತ್ತಾ?




