Bengaluru : ಶಕ್ತಿಸೌಧ ವಿಧಾನಸೌಧದಲ್ಲೇ 300 ಗ್ರಾಂ ಚಿನ್ನಾಭರಣ , 1.5 ಲಕ್ಷ ರೂ. ಕಳ್ಳತನ!

Bengaluru : ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಶಕ್ತಿಸೌಧ ವಿಧಾನಸೌಧದಲ್ಲಿರುವ ನಗರಾಭಿವೃದ್ಧಿ ಸಚಿವ ಸುರೇಶ್ (Byrati Suresh) ಅವರ ಕಚೇರಿಯಲ್ಲೇ ಕಳ್ಳತನ ನಡೆದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ವಿಧಾನಸೌಧದಲ್ಲೇ 300 ಗ್ರಾಂ ಚಿನ್ನಾಭರಣ , 1.5 ಲಕ್ಷ ರೂ. ಕಳ್ಳತನ!
ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಸಹಿತ ಕಚೇರಿ ಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು.
ಇದನ್ನು ಓದಿ : ತಿರುಪತಿ ಭಕ್ತರಿಗೆ ಗುಡ್ ನ್ಯೂಸ್ – ಲಡ್ಡು ವಿಚಾರದಲ್ಲಿ ಬಿಗ್ ಅಪ್ಡೇಟ್ಸ್..!

ಡಿ ಗ್ರೂಪ್ ನೌಕರ ಅರೆಸ್ಟ್
ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಚೇರಿ ಆವರಣದ CCTV ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಪರಿಶೀಲನೆಯ ವೇಳೆ ಆಡಳಿತ ಸುಧಾರಣೆಗಳ ಇಲಾಖೆ (DPAR)ಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತಕ್ಷಣ ಕಾರ್ಯಾಚರಣೆ ನಡೆಸಿದ ವಿಧಾನಸೌಧ ಪೊಲೀಸರು ಆರೋಪಿ ಡಿ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ.

ವಿಧಾನಸೌಧದ ಒಳಗಡೆ ಭದ್ರತಾ ಸಿಬ್ಬಂದಿಬಿಟ್ಟಿದ್ದು ಯಾಕೆ?
ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದರೂ ಈಗ ಹಲವು ಪ್ರಶ್ನೆಗಳು ಎದ್ದಿದೆ. ಪರಿಶೀಲನೆ ನಡೆಸದೇ ಚಿನ್ನಾಭರಣ, ನಗದನ್ನು ವಿಧಾನಸೌಧದ ಒಳಗಡೆ ಭದ್ರತಾ ಸಿಬ್ಬಂದಿಬಿಟ್ಟಿದ್ದು ಯಾಕೆ? ಮೆಟಲ್ ಡಿಟೆಕ್ಟರ್, ತಪಾಸಣೆ ಕೇವಲ ನೆಪಕ್ಕೆ ಮಾತ್ರ ಇದೆಯೇ? ಸಚಿವರ ಕಚೇರಿಯಲ್ಲಿನ ಕಳ್ಳತನ ಭದ್ರತಾ ವೈಫಲ್ಯದ ಪ್ರತೀಕವೇ ಎಂಬ ಗಂಭೀರ ಪ್ರಶ್ನೆ ಎದ್ದಿದೆ.
ಇದನ್ನು ನೋಡಿ : TUMKURU|ಹುಷಾರ್..ಅಪ್ಪಿತಪ್ಪಿ ಈ ಆಸ್ಪತ್ರೆಗೆ ಹೋಗ್ಬೇಡಿ ಇಲ್ಲಿ ಟ್ರೀಟ್ಮೆಂಟ್ ತಗೊಂಡ್ರೆ ಅಷ್ಟೇ ಕಥೆ




