ಬೈಕ್ ಹಾಗೂ ಖಾಸಗಿ ಬಸ್ ನಡುವೆ Accident – ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವು.

ಬೈಕ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಊರ್ಡಿಗೇರೆ ಬಳಿಯ ಸಾತಘಟ್ಟದಲ್ಲಿ ನಡೆದಿದೆ. Accident ನಲ್ಲಿ ಮೃತಪಟ್ಟ ವ್ಯಕ್ತಿಯನ್ನು 60 ವರ್ಷದ ಗಂಗಣ್ಣ ಎಂದು ಗುರುತಿಸಲಾಗಿದೆ. ಇನ್ನೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ಬೈಕ್ ಹಾಗೂ ಖಾಸಗಿ ಬಸ್ ನಡುವೆ Accident
ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ಮಿತ್ರಹಳ್ಳಿ ಗ್ರಾಮದ ಗಂಗಣ್ಣ ಅನ್ನುವವರು ತಮ್ಮ ಸ್ನೇಹಿತರೊಂದಿಗೆ ತುಮಕೂರು ಕಡೆಗೆ ಬರುತ್ತಿದ್ದರು. ಈ ವೇಳೆ ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಗಣ್ಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಇದನ್ನು ಓದಿ : ಪೋಷಕರ ಕಣ್ಣೀರಿಗೂ ಕರಗದ ಮಗಳು ಮುಸ್ಲಿಂ ಯುವಕನೊಂದಿಗೆ ಪರಾರಿ!

ಪ್ರಕರಣ ದಾಖಲು
ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ವ್ಯಕ್ತಿಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ನೋಡಿ : ಬೇಕು ಅಂತಲೇ ಕೆಲವರು ನನ್ನ ತೇಜೋವಧೆ ಮಾಡ್ತಿದ್ದಾರೆ- ಶಿವಲಿಂಗೇಗೌಡ ಕೆಂಡಾಮಂಡಲ




