Bengaluru “ ‘ಬಿಸಿಯೂಟ’ ನೌಕರರ ಮುಷ್ಕರ – ಪರ್ಯಾಯ ವ್ಯವಸ್ಥೆಗೆ ಸರ್ಕಾರ ಆದೇಶ !

Bengaluru : ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (CITU) ವತಿಯಿಂದ ಫೆಬ್ರವರಿ 12, 2026ರಂದು ಬಿಸಿಯೂಟ ನೌಕರರ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಶಾಲಾ ಮಕ್ಕಳಿಗೆ ಬಿಸಿಯೂಟ ಹಾಗೂ ಪೌಷ್ಠಿಕ ಆಹಾರ ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಇದನ್ನು ಓದಿ : ಶೀಘ್ರದಲ್ಲೇ ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ..?

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? – Bengaluru
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದ ಪತ್ರದನ್ವಯ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (CITU) ರವರು ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ದಿನಾಂಕ:12/02/2026 ರಂದು ಒಂ ದು ದಿನ ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದು ಮುಷ್ಕರದ ತಿಳುವಳಿಕೆ ಪತ್ರ ಸಲ್ಲಿಸಿರುತ್ತಾರೆ. ಸದರಿ ದಿನದಂದು ರಾಜ್ಯದ ಸರ್ಕಾರಿ / ಅನುದಾನಿತ ಶಾಲೆಗಳಲ್ಲಿನ ಅಡುಗೆ ಸಿಬ್ಬಂದಿಗಳಿಗೆ ಶಾಲೆಯಲ್ಲಿ ಮಕ್ಕಳ ಬಿಸಿಯೂಟ ವಿತರಣೆಗೆ ತೊಂದರೆಯಾಗುವುದರಿಂದ ಮುಷ್ಕರದಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಶಾಲಾ ಮುಖ್ಯ ಶಿಕ್ಷಕರುಗಳು ಮನವಲಿಸುವಂತೆ ತಿಳಿಸಿದೆ.
ಆದಾಗ್ಯೂ ಸದರಿ ದಿನದಂದು ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕ್ಷೀರಭಾಗ್ಯ ಯೋಜನೆ, ಬಿಸಿಯೂಟ ಯೋಜನೆ, ಪೂರಕ ಪೌಷ್ಠಿಕ ಆಹಾರ ಯೋಜನೆಯ ವಿತರಣೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ವ್ಯತ್ಯಯವಾಗದಂತೆ ಅಗತ್ಯ ಪೂರಕ ಕ್ರಮಗಳನ್ನು/ಪರ್ಯಾಯ ವ್ಯವಸ್ಥೆಯನ್ನು ಕೈಗೊಂಡು ಯೋಜನೆಯನ್ನು ಯಶಸ್ವಿಯಾಗಿಸುವಂತೆ ಎಲ್ಲಾ ಜಿಲ್ಲೆಗಳ ಸಂಬಂಧಿಸಿದ ಶಿಕ್ಷಣಾಧಿಕಾರಿಗಳು, ಸಹಾಯಕ ನಿರ್ದೇಶಕರು, ಪಿಎಂ ಪೋಷಣ್ ಶಕ್ತಿ ನಿರ್ಮಾಣ ಹಾಗೂ ಎಲ್ಲಾ ಶಾಲಾ ಮುಖ್ಯ ಶಿಕ್ಷಕರುಗಳಿಗೆ ತಿಳಿಸಿದೆ.

ಇದನ್ನು ನೋಡಿ : ಗ್ರಾಮದ ರೈತರಿಗೆ ಇದೆಂಥಾ ಅನ್ಯಾಯ.. ಅಕ್ರಮ ಖಾತೆ ಮಾಡಿಕೊಂಡು ಮಹಾಮೋಸ




