ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯರ ಜನ್ಮ ದಿನಾಚರಣೆ ಅಂಗವಾಗಿ, ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ CM ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

CM ಸಿದ್ದರಾಮಯ್ಯ ಅವರ ಮಾತಿನಲ್ಲಿ, ಭವ್ಯವಾದ ವಿಧಾನಸೌಧ ನಿರ್ಮಾಣದ ಕೀರ್ತಿ ಕೆಂಗಲ್ ಹನುಮಂತಯ್ಯರಿಗೆ ಸಲ್ಲುತ್ತದೆ.
ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ಅವರು, ಕೇಂದ್ರ ರೈಲ್ವೆ ಮಂತ್ರಿಯಾಗಿ ಮತ್ತು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಜೊತೆಗೆ, ಸಂವಿಧಾನ ರಚನಾ ಸಮಿತಿಗೆ ಅಮೂಲ್ಯ ಸಲಹೆಗಳನ್ನು ನೀಡಿ ರಾಷ್ಟ್ರ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದ್ದರು.

ರಾಜ್ಯದ ಪ್ರಥಮ ಚುನಾಯಿತ ಮುಖ್ಯಮಂತ್ರಿಯಾಗಿ ಗುರುತಿಸಿಕೊಂಡ ನಾಯಕ
ಹನುಮಂತಯ್ಯರು ಕರ್ನಾಟಕದ ಪ್ರಥಮ ಚುನಾಯಿತ ಮುಖ್ಯಮಂತ್ರಿಯಾಗಿದ್ದರು. ಅವರು ವಿಧಾನಸೌಧಕ್ಕೆ ಬುನಾದಿ ಹಾಕಿದರೂ, ಉದ್ಘಾಟನೆಯ ವೇಳೆಗೆ ಮುಖ್ಯಮಂತ್ರಿಯಾಗಿರದಿರುವುದು ನೋವಿನ ಸಂಗತಿಯೆಂದು ಸಿದ್ದರಾಮಯ್ಯ ಹೇಳಿದರು.
ಅವರ ಆದರ್ಶ ಮತ್ತು ಸಿದ್ಧಾಂತಗಳು ಇಂದಿಗೂ ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿವೆ ಎಂದರು.
ಇದನ್ನೂ ಓದಿ : ಚಲಿಸುತ್ತಿದ್ದ KSRTC ಬಸ್ ಆಕ್ಸೆಲ್ Cut.. ತಪ್ಪಿದ ಭಾರೀ ಅನಾಹುತ.!
ಮತಪರಿಷ್ಕರಣೆ ಎಸ್ಐಆರ್ ಕಾರ್ಯಕ್ಕೆ ಅಡ್ಡಿಪಡಿಸುವುದನ್ನು ಸಹಿಸುವುದಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿರುವ ಬಗ್ಗೆ ಪ್ರಶ್ನಿಸಿದಾಗ, ಯಾವ ಸಂದರ್ಭದಲ್ಲಿದು ಹೇಳಲಾಗಿದೆ ಎಂಬ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುವುದಾಗಿ ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಬಜೆಟ್ ಸಿದ್ಧತೆ ಸಭೆ – ಡಿಸಿಎಂ ಗೈರುಹಾಜರಿ ಕುರಿತು ಸ್ಪಷ್ಟನೆ
ಬಜೆಟ್ ಸಿದ್ಧತೆ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೈರುಹಾಜರಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ,
ಅಸ್ಸಾಂ ರಾಜ್ಯದ ಸಭೆಗೆ ಹಾಜರಾಗಬೇಕಾದ ಕಾರಣ ಅವರು ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲವೆಂದು ತಿಳಿಸಿದರು.

ನಾಯಕತ್ವ ಬದಲಾವಣೆ – ವರಿಷ್ಠರ ತೀರ್ಮಾನವೇ ಅಂತಿಮ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ,
ಈ ವಿಷಯದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದರು. ವರಿಷ್ಠರು ಬಯಸಿದರೆ ಮಾತ್ರ ದೆಹಲಿಗೆ ತೆರಳುವುದಾಗಿ ಅವರು ಹೇಳಿದರು.
ಪ್ರತಾಪ್ ಸಿಂಹ ವಿಚಾರ – ಬಿಜೆಪಿಯೇ ಟಿಕೆಟ್ ನೀಡಲಿಲ್ಲ
ಶಾಸಕ ಯತೀಂದ್ರ ಸಿದ್ದರಾಮಯ್ಯರ ಮೇಲೆ ಮಾಜಿ ಸಂಸದ ಪ್ರತಾಪ್ ಸಿಂಹ ಮಾಡಿದ ಟೀಕೆ ಕುರಿತು ಮಾತನಾಡಿದ ಮುಖ್ಯಮಂತ್ರಿ, ಬಿಜೆಪಿಯವರೇ ತಮ್ಮ ಪಕ್ಷದ ಪ್ರತಾಪ್ ಸಿಂಹರಿಗೆ ಟಿಕೆಟ್ ನೀಡಲಿಲ್ಲ ಎಂದು ಪ್ರತಿಕ್ರಿಯಿಸಿದರು.
MUST WATCH : ಗಡುವಿಗೂ ಜಗ್ಗದ ಬೀದಿ ವ್ಯಾಪಾರಿಗಳು ಫೈನಲ್ ವಾರ್ನಿಂಗ್ ಕೊಟ್ಟ ಅಧಿಕಾರಿಗಳು




