Yadagiri : ಮದ್ಯ ಕುಡಿಯುವುದನ್ನು ಬಿಡು ಎಂದಿದಕ್ಕೆ ಮಹಿಳೆಯೊಬ್ಬಳು ತನ್ನ ಮಗಳನ್ನೇ ಕತ್ತು ಹಿಸುಕಿ ಕೊಂದ ಘಟನೆ ಯಾದಗಿರಿಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.

Yadagiri : ಯಾದಗಿರಿಯ ರಾಜೀವ್ ಗಾಂಧಿ ನಗರದಲ್ಲಿ ಮದ್ಯಪಾನ ಮಾಡಬೇಡ ಎಂದು ಹೇಳಿದ್ದಕ್ಕೆ ತಾಯಿಯೇ ತನ್ನ ಮಗಳನ್ನ ಕೊಂದಿರುವ ಘಟನೆ ನಡೆದಿದೆ. ಪ್ರತಿಭಾ (11) ಮೃತ ಬಾಲಕಿಯಾಗಿದ್ದಾಳೆ.
ಕುಡಿಯಬೇಡಮ್ಮ ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂದ ತಾಯಿ
ನಿರ್ಮಲಾ ಎಂಬಾಕೆ ತಾನು ಹೆತ್ತ ಮಗಳನ್ನೇ ಹತ್ಯೆ ಮಾಡಿದ್ದು, ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕತೆ ಕಟ್ಟಿದ್ದಾಳೆ. ಸದ್ಯ ಆರೋಪಿ ನಿರ್ಮಲಾಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜ್ಯೂಸ್ ಕುಡಿಯಲು 15 ರೂ. ಕೊಡುವಂತೆ ಮಗಳು ಕೇಳಿದ್ದಳು. ಆದ್ರೆ ನಾನು ಹಣ ನೀಡದ್ದಕ್ಕೆ ಪಕ್ಕದ ಮನೆಗೆ ಹೋಗಿ ಕುರ್ಚಿ ತೆಗೆದುಕೊಂಡು ಬಂದು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರ ಮುಂದೆ ಹೇಳಿದ್ದಳು.
ಸೀರೆಯಿಂದ ನೇಣು ಬಿಗಿದುಕೊಂಡ್ರೆ ಕುತ್ತಿಗೆ ಭಾಗದಲ್ಲಿ ಗಾಯವಿರುತ್ತೆ. ಆದ್ರೆ ಪ್ರತಿಭಾ ದೇಹದಲ್ಲಿ ಯಾವುದೇ ಗಾಯಗಳಿರಲಿಲ್ಲ. ಹೀಗಾಗಿ ಪೊಲೀಸರು ನಿರ್ಮಲಾಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಕೊಲೆ ಎಂದು ಬಯಲಾಗಿದೆ.

ಕಳೆದ 3 ವರ್ಷದ ಹಿಂದೆ ಪತಿ ಸಾವನ್ನಪ್ಪಿದ ಬಳಿಕ ಮೂವರು ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗುವಿನ ಜೊತೆ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರಂತೆ.
ಮನೆ ಕೆಲಸ ಮಾಡುತ್ತಿದ್ದ ನಿರ್ಮಲಾ, ಗಂಡನನ್ನ ಕಳೆದುಕೊಂಡ ಬಳಿಕ ಮದ್ಯ ವ್ಯಸನಿಯಾಗಿದ್ದು, ಕುಡಿಯೋಕೆ ಹಣ ಸಾಲದ್ದಕ್ಕೆ ತನ್ನ ಮಕ್ಕಳನ್ನು ಕೆಲಸಕ್ಕೆ ಕಳುಹಿಸುತ್ತಿದ್ದು, ಮಕ್ಕಳ ದುಡಿಮೆಯಲ್ಲಿಯೇ ಸಂಸಾರ ನಡೆಯುತ್ತಿತ್ತಂತೆ.
ಇನ್ನು ಕುಡಿತಕ್ಕೆ ದಾಸಿಯಾಗಿದ್ದ ಮಹಿಳೆಯೇ ಮಗಳ ಪಾಲಿಗೆ ವಿಲನ್ ಆಗಿದ್ದು, ಚಿಕ್ಕವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡಿದ್ದ ಬಾಲಕಿ, ಓದುವುದನ್ನು ಬಿಟ್ಟು ದುಡಿಯೋಕೆ ಹೋಗ್ತಿದ್ದಳಂತೆ.
ಇದನ್ನೂ ಓದಿ : ಚಲಿಸುತ್ತಿದ್ದ KSRTC ಬಸ್ ಆಕ್ಸೆಲ್ Cut.. ತಪ್ಪಿದ ಭಾರೀ ಅನಾಹುತ.!

ಮಗಳನ್ನು ಹತ್ಯೆ ಮಾಡಿ ಆತ್ಮಹತ್ಯೆ ಕತೆ ಕಟ್ಟಿದ್ದಾಳೆ
ಇದೇ ಕಾರಣಕ್ಕೆ ಕುಡಿಯಬೇಡಮ್ಮ, ಈಗಾಗಲೇ ಅಪ್ಪನನ್ನ ಕಳೆದುಕೊಂಡಿದ್ದೇವೆ. ನಿನಗೂ ಏನಾದರೂ ಆದರೆ ಏನು ಮಾಡೋದು ಎಂದು ಗೋಗರೆಯುತ್ತಿದ್ದರು. ನಿನ್ನೆ ಕೂಡ ಪ್ರತಿಭಾ ತಾಯಿಗೆ ಅದೇ ಮಾತು ಹೇಳಿದ್ದಾಳೆ.
ಇದರಿಂದ ಕುಡಿದ ನಶೆಯಲ್ಲಿದ್ದ ನಿರ್ಮಲಾ ಸಿಟ್ಟಿನಲ್ಲಿ ಕತ್ತು ಹಿಸುಕಿ ಮಗಳನ್ನೇ ಕೊಲೆ ಮಾಡಿ ಬಳಿಕ ಸೀರೆಯಿಂದ ನೇಣುಬಿಗಿದು ನಾಟವಾಡಿದ್ದಾಳೆ.
ಸದ್ಯ ಪೊಲೀಸರು ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
MUST WATCH : ಗಡುವಿಗೂ ಜಗ್ಗದ ಬೀದಿ ವ್ಯಾಪಾರಿಗಳು ಫೈನಲ್ ವಾರ್ನಿಂಗ್ ಕೊಟ್ಟ ಅಧಿಕಾರಿಗಳು




