Chamarajanagara : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ (Leopard) ದಾಳಿ ಮಾಡಿರುವ ಘಟನೆ ನಡೆದಿದೆ.

Chamarajanagara : ಇತ್ತೀಚೆಗೆ ಹಲವೆಡೆ ದಿನದಿಂದ ದಿನಕ್ಕೆ ಚಿರತೆ ಕಾಟ ವಿಪರೀತವಾಗ್ತಾ ಇದ್ದು, ಜನರ ನಿದ್ದಗೆಡಿಸಿವೆ. ಇತ್ತ ಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದೆ.
ಭುವಳ್ಳಿ ಗ್ರಾಮದ 8 ವರ್ಷದ ಬಾಲಕ ಶ್ರೇಯಸ್ (8) ಮೇಲೆ ದಾಳಿ ನಡೆಸಿದ್ದು, ಪೋನ್ನಾಚಿ ಕ್ರಾಸ್ ಮೂಲಕ ಪಾದಯಾತ್ರೆ ಆರಂಭಿಸಿದ ಶ್ರೇಯಸ್, ಅರಣ್ಯ ಪ್ರದೇಶದಲ್ಲಿ ಸಾಗುತ್ತಿದ್ದಾಗ ಚಿರತೆ ಏಕಾಏಕಿ ದಾಳಿ ನಡೆಸಿದಾಗ, ಬಾಲಕನು ತಕ್ಷಣವೇ ಗಾಯಗೊಂಡಿದ್ದಾನೆ.
ಇನ್ನು ಆತನ ಜೊತೆಯಲ್ಲಿದ್ದವರು ಬಾಲಕನನ್ನು ತಕ್ಷಣ ಬಸ್ಸಿನಲ್ಲಿ ಮಲೆ ಮಹದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಜಗದೀಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಕುಡಿಯೋದನ್ನ ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನ ಕೊಂದ ತಾಯಿ.!
ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕರಿಗೆ ಒಂದು ಬೃಹತ್ ಗಾತ್ರದ ಚಿರತೆ ಹಾಗೂ ಒಂದು ಚಿಕ್ಕ ಚಿರತೆ ಕಾಣಿಸಿಕೊಂಡಿದೆ.
ಪಾದಯಾತ್ರೆಯ ಮೂಲಕ ಸಾಗುತ್ತಿದ್ದ ಭಕ್ತಾದಿಗಳಿಗೆ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸುರಕ್ಷತಾ ಕ್ರಮ ಕೈಗೊಂಡಿದ್ದಾರೆ. ಅರಣ್ಯ ಪ್ರದೇಶದ ಬದಲು ಮುಖ್ಯ ರಸ್ತೆಯ ಮೂಲಕ ಪಾದಯಾತ್ರೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.
MUST WATCH : ಅರಣ್ಯ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ




