Toxic ಚಿತ್ರಕ್ಕೆ ಒಂದರ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ.

ನಟ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಚಿತ್ರಕ್ಕೆ ಒಂದರ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಟೀಸರ್ ವಿರುದ್ಧ ಮಹಿಳಾ ಒಕ್ಕೂಟಗಳು ಸಿಡಿದೆದ್ದಿದವು. ಇದೀಗ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ತಿರುಗಿಬಿದ್ದಿದೆ.
ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
ಚಿತ್ರದ ಕೆಲವು ದೃಶ್ಯಗಳಲ್ಲಿ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡಲಾಗಿದೆ ಹಾಗೂ ಕ್ರೈಸ್ತ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟುಮಾಡಲಾಗಿದೆ ಎಂದು ಆರೋಪಿಸಿ ಒಕ್ಕೂಟ ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಸಚಿವರು ಹಾಗೂ ಸೆನ್ಸಾರ್ ಮಂಡಳಿಗೆ ಅಧಿಕೃತ ದೂರು ಸಲ್ಲಿಸಿದೆ.

ಸಂತ ಮಿಕಯೇಲ್ಗೆ ಅಪಮಾನ ಮಾಡಲಾಗಿದೆ
Toxic ಸಿನಿಮಾದಲ್ಲಿ ಕ್ರೈಸ್ತರ ದೇವದೂತ ಸಂತ ಮಿಕಯೇಲ್ ಅವರ ಚಿತ್ರಣದ ಮುಂದೆ ಅಶ್ಲೀಲ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇಂತಹ ದೃಶ್ಯಗಳು ಕ್ರೈಸ್ತ ಸಮುದಾಯಕ್ಕೆ ಮುಜುಗರ ಉಂಟುಮಾಡುತ್ತವೆ ಎಂದು ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.

ಸಂಬಂಧಿತ ಯೂಟ್ಯೂಬ್ ಪೋಸ್ಟ್ಗಳನ್ನು ಕೂಡಲೇ ತೆಗೆದುಹಾಕಬೇಕು ಹಾಗೂ ಸಿನಿಮಾದಲ್ಲಿರುವ ಆ ದೃಶ್ಯಗಳನ್ನು ಸಂಪೂರ್ಣವಾಗಿ ಕೈಬಿಡುವಂತೆ ಅವರು ಮನವಿ ಮಾಡಿದ್ದಾರೆ. ಇನ್ನು ಅಪಮಾನ ಮಾಡಿದ್ದಕ್ಕಾಗಿ ಕ್ರೈಸ್ತರಲ್ಲಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಪೋಸ್ಟ್ಗಳನ್ನ ತೆಗೆಯದಿದ್ದರೆ, ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದನ್ನು ಓದಿ : Dina Bhavishya|ದಿನ ಭವಿಷ್ಯ 11 ಫೆಬ್ರವರಿ 2026

ಮಹಿಳಾ ಒಕ್ಕೂಟಗಳ ಆಕ್ರೋಶ
ಇದಕ್ಕೂ ಮುನ್ನ ‘ಟಾಕ್ಸಿಕ್’ ಟೀಸರ್ನಲ್ಲಿನ ಕೆಲವು ದೃಶ್ಯಗಳು ಅಶ್ಲೀಲವಾಗಿದ್ದು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆಯಾಗುತ್ತಿವೆ ಎಂದು ಮಹಿಳಾ ಸಂಘಟನೆಗಳು ಆರೋಪಿಸಿದ್ದವು. ಈ ಸಂಬಂಧ ಬೆಂಗಳೂರಿನ ರಾಜ್ಯ ಮಹಿಳಾ ಆಯೋಗದ ಕಚೇರಿಗೆ ದೂರು ನೀಡಲಾಗಿತ್ತು.
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ಸಲ್ಲಿಸಿದ ದೂರಿನಲ್ಲಿ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕುವಂತೆ ಮನವಿ ಮಾಡಲಾಗಿತ್ತು.

ಇದನ್ನು ನೋಡಿ : ಇವರೆಂಥಾ ಶಿಕ್ಷಕರು ಇರ್ಬೇಕು..?- ಮಗು ಬೆರಳು ಕಟ್ ಆಗಿದ್ರು ಸುಮ್ಮನೆ ಇದ್ರು




