Vijayanagara : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಹಾಗೂ ಹೈಕಮಾಂಡ್ ಅವರನ್ನು ಭೇಟಿ ಮಾಡುವ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದೆ.

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಮತ್ತು ಹೈಕಮಾಂಡ್ ಭೇಟಿಯ ವಿಚಾರದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಇದರ ಮಧ್ಯೆ ಸಚಿವ ಜಮೀರ್ ಅಹ್ಮದ್ ಖಾನ್ 2028ರವರೆಗೆ ಸಿದ್ದರಾಮಯ್ಯಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ
Vijayanagara ದಲ್ಲಿ ಮಾತನಾಡಿದ ಅವರು, 2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ, ಮುಂದಿನ ಚುನಾವಣೆಯೂ ಅವರ ನೇತೃತ್ವದಲ್ಲೇ ನಡೆಯಲಿದೆ. ಹಾಗಾಗಿ 2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ಚರ್ಚೆಗೆ ತೆರೆ ಎಳೆದಿದ್ದಾರೆ.
ಇದನ್ನು ಓದಿ : ABD ಟಿ20 ವಿಶ್ವಕಪ್ ದಾಖಲೆ ಮುರಿದ ಕ್ವಿಂಟನ್ ಡಿ ಕಾಕ್

ಸಿಎಂ ಬದಲಾವಣೆಯ ಊಹಾಪೋಹಗಳಿಗೆ ತೆರೆ
“ನಮ್ಮದು ಹೈಕಮಾಂಡ್. ಪಕ್ಷದ ಹೈಕಮಾಂಡ್ ಏನೇ ನಿರ್ಧಾರ ತಗೊಂಡ್ರೂ ನಾವು ಬದ್ಧರಾಗಿರುತ್ತೇವೆ. ಒಂದು ವೇಳೆ ಬೀದಿಯಲ್ಲಿ ಹೋಗೋ ದಾಸಯ್ಯನನ್ನು ಸಿಎಂ ಮಾಡಿದ್ರೂ ನಾವು ಒಪ್ಪಿಕೊಳ್ಳುತ್ತೇವೆ.
ಆದರೆ ಸದ್ಯಕ್ಕೆ 2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ” ಎಂದು ಹೇಳುವ ಮೂಲಕ ಸಿಎಂ ಬದಲಾವಣೆಯ ಊಹಾಪೋಹಗಳಿಗೆ ತೆರೆ ಎಳೆದರು.

ಇದನ್ನು ನೋಡಿ : ಸೊಣ್ಣಾಪುರದಲ್ಲಿ ಯುವಕನ ಸಾ* ಪ್ರಕರಣ ನ್ಯಾಯ ಕೊಡಿಸಿ ಅಂತ ಕುಟುಂಬದ ಕಣ್ಣೀರು




