Karnataka : ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ (lokayukta) ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು (Mysuru), ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ.

Karnataka : ಭ್ರಷ್ಟಾಚಾರ ಆರೋಪದ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಸಂಚಲನ ಮೂಡಿಸಿದ್ದಾರೆ.
ಬೆಂಗಳೂರು, ಮೈಸೂರು, ದಾವಣಗೆರೆ ಹಾಗೂ ಶಿವಮೊಗ್ಗ ಸೇರಿದಂತೆ ಹಲವು ಕಡೆ ಏಕಕಾಲದಲ್ಲಿ ಕಾರ್ಯಾಚರಣೆ ನಡೆದಿದ್ದು, ಮಹತ್ವದ ದಾಖಲೆಗಳ ಶೋಧ ನಡೆಸುತ್ತಿದ್ದಾರೆ.
PWD ಚೀಫ್ ಇಂಜಿನಿಯರ್ ಪುರುಷೋತ್ತಮ ದಾಸ್ ಅವರಿಗೆ ಸೇರಿದ ಒಟ್ಟು 11 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಮೈಸೂರಿನಲ್ಲಿ 5 ಸ್ಥಳಗಳು ಹಾಗೂ ಬೆಂಗಳೂರಿನಲ್ಲಿ 6 ಸ್ಥಳಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಆಸ್ತಿ ವಿವರಗಳು ಮತ್ತು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.
ಇದನ್ನೂ ಓದಿ : 2028ರವರೆಗೆ ಸಿದ್ದರಾಮಯ್ಯರೆ ಸಿಎಂ, ಆಮೇಲೆ ಬೀದಿ ದಾಸಯ್ಯನನ್ನ CM ಮಾಡಿದ್ರೂ ಓಕೆ – ಜಮೀರ್

ಇದೇ ವೇಳೆ ದಾವಣಗೆರೆಯ ಬೆಸ್ಕಾಂ ಸಿವಿಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಂಜಿನಿಯರ್ ಆರ್.ಹೆಚ್. ಅರ್ಜುನ್ ಅವರ ಮನೆ ಹಾಗೂ ಕಚೇರಿಗಳ ಮೇಲೂ ದಾಳಿ ನಡೆದಿದೆ. ಆದಾಯಕ್ಕಿಂತ ಮೀರಿ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಆರೋಪ ಅವರ ವಿರುದ್ಧ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ದಾವಣಗೆರೆ ನಗರದ ನಿಟ್ಟುವಳ್ಳಿಯಲ್ಲಿರುವ ಅರ್ಜುನ್ ನಿವಾಸ, ಕಚೇರಿ ಹಾಗೂ ಶಿವಮೊಗ್ಗದ ಮನೆಯ ಮೇಲೂ ಏಕಕಾಲದಲ್ಲಿ ಶೋಧ ನಡೆದಿದೆ.
ಶಿವಮೊಗ್ಗದ ಮನೆಯಲ್ಲಿ ಆಸ್ತಿ ಸಂಬಂಧಿತ ದಾಖಲೆಗಳು, ಚಿನ್ನ ಹಾಗೂ ಬೆಳ್ಳಿ ವಸ್ತುಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಇನ್ನಷ್ಟು ಮಹತ್ವದ ದಾಖಲೆಗಳಿಗಾಗಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.
ಲೋಕಾಯುಕ್ತ ದಾಳಿಯಿಂದ ಸಂಬಂಧಿತ ಅಧಿಕಾರಿಗಳ ವಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ತನಿಖೆ ಮುಂದುವರಿದಿದೆ.
MUST WATCH : ಮನೆಗೆ ಬರ್ತಿದೆ ಗಲೀಜು ನೀರು- ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ




