Raichur ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗ್ರೀನ್ಲೈನ್ ಖಾಸಗಿ ಬಸ್ ಆಂಧ್ರದ ಆಲೂರು ಬಳಿ ಕಾರಿನೊಂದಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

Raichur ನಿಂದ ಬೆಂಗಳೂರಿಗೆ ಹೊರಟಿದ್ದ ಗ್ರೀನ್ ಲೈನ್ ಖಾಸಗಿ ಬಸ್ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆಲೂರು ಸಮೀಪ ಭೀಕರ ಅಪಘಾತಕ್ಕೀಡಾಗಿದೆ. ಖಾಸಗಿ ಬಸ್ ಹಾಗೂ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕಾರು ಸಂಪೂರ್ಣ ನಜ್ಜುಗುಜ್ಜು – ಬೆಂಕಿ ಹೊತ್ತಿಕೊಂಡ ಘಟನೆ
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಕೂಡ ಹೊತ್ತಿಕೊಂಡಿದೆ. ತಕ್ಷಣವೇ ಬಸ್ನಲ್ಲಿದ್ದ ಪ್ರಯಾಣಿಕರು ಸಹಾಯಕ್ಕೆ ಧಾವಿಸಿ ಗಾಯಗೊಂಡ ಕಾರು ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ : ಮಂತ್ರಾಲಯ ಹುಂಡಿ ಎಣಿಕೆ – 21 ದಿನಗಳಲ್ಲಿ 3 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ

ಪ್ರಯಾಣಿಕರಿಗೆ ಸಂಕಷ್ಟ – 2 ಗಂಟೆ ಚಳಿಯಲ್ಲಿ ನಿರೀಕ್ಷೆ
ಅಪಘಾತದ ಬಳಿಕ ಬಸ್ನಲ್ಲಿದ್ದ ಪ್ರಯಾಣಿಕರು ಸುಮಾರು 2 ಗಂಟೆಗಳ ಕಾಲ ಚಳಿಯಲ್ಲಿ ಸಂಕಷ್ಟ ಅನುಭವಿಸಿದರು. ಬಳಿಕ ಸ್ಥಳೀಯರು ಮತ್ತು ಪೊಲೀಸರು ನೆರವು ನೀಡಿ ಪರಿಸ್ಥಿತಿ ನಿಯಂತ್ರಿಸಿದರ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರು ಚಾಲಕನ ಅತಿವೇಗದ ಚಾಲನೆ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಈ ಘಟನೆ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
MUST WATCH : ಮನೆಗೆ ಬರ್ತಿದೆ ಗಲೀಜು ನೀರು- ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ




