Chikkaballapura : ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

Chikkaballapura : ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿರುವ ಪೂಜನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ವೃದ್ಧನ ಶವ ರೈಲಿಗೆ ಸಿಲುಕಿದ ಸ್ಥಿತಿಯಲ್ಲಿ ಪತ್ತೆ..!
ಇನ್ನು ಸಾವನ್ನಪ್ಪಿದ ವ್ಯಕ್ತಿಯನ್ನು ಪೂಜನಹಳ್ಳಿ ಗ್ರಾಮದ ನಿವಾಸಿ 65 ವರ್ಷದ ಶ್ರೀಧರ್ ಎಂದು ಗುರುತಿಸಲಾಗಿದ್ದು, ಈ ಸಾವಿನ ಸುತ್ತ ಹಲವು ಅನುಮಾನಗಳು ಮೂಡುತ್ತಿವೆ.
ಮೃತ ಶ್ರೀಧರ್ ಅವರು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗಷ್ಟೇ ತಾನೇ ಕೆಲಸದಿಂದ ನಿವೃತ್ತಿಯಾಗಿದ್ದರು ಎಂದು ತಿಳಿದುಬಂದಿದೆ.

ಶ್ರೀಧರ್ ಅವರು ಮದುವೆಯಾಗದೇ ಇದ್ದು, ಮನೆಯಲ್ಲಿದ್ದ ಕಾರಣ ಆಗಾಗ್ಗೆ ತನ್ನ ಸಹೋದರನ ಮನೆಗೆ ಹೋಗಿ ಬರುತ್ತಿದ್ದರಂತೆ. ಜೊತೆಗೆ ಇತ್ತೀಚೆಗೆ ತಾನೇ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಮಾರಿ ಮಾರಿದ್ದರು ಎನ್ನಲಾಗುತ್ತಿದೆ.
ಆದರೆ, ಇದೀಗ ಶ್ರೀಧರ್ ಅವರ ಶವ ರೈಲಿಗೆ ಸಿಲುಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ. ಇದು ಆಕಸ್ಮಿಕ ಸಾವೋ, ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳೀಯರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.
ಬೈಯಪ್ಪನಹಳ್ಳಿ ರೈಲ್ವೆ ಠಾಣೆ ವ್ಯಾಪ್ತಿಯಲ್ಲಿ ಘಟನೆ
ಇನ್ನು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಜನ್ಮ ಕೊಟ್ಟ ತಂದೆ ತಾಯಿಯನ್ನೇ ಕೊಂದ ಪಾಪಿ ಮಗ.!

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ನಂತರ ಸಾವಿನ ನಿಖರ ಕಾರಣ ಸ್ಪಷ್ಟವಾಗಲಿದೆ. ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
MUST WATCH : ರೈಲಿಗೆ ಸಿಲುಕಿ ವೃದ್ಧ ದಾರುಣ ಸಾವು – ಸಾವಿನ ಸುತ್ತ ಮೂಡಿವೆ ಹಲವು ಅನುಮಾನಗಳು..!?




