Road Accident : ನೆಲಮಂಗಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಆರೆಂಜ್ ತುಂಬಿದ ಲಾರಿಯೊಂದು ಪಲ್ಟಿಯಾಗಿದ್ದು, ಲಾರಿಯಲ್ಲಿದ್ದ ಆರೆಂಜ್ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.

Road Accident : ನೆಲಮಂಗಲ ತಾಲ್ಲೂಕಿನ ಕೆಂಗಲ್ ಗ್ರಾಮದ ಬಳಿ ಮುಂಬೈನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಆರೆಂಜ್ ಹಣ್ಣು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ನೆಲಮಂಗಲದ ಬಳಿ ಆರೆಂಜ್ ತುಂಬಿದ ಲಾರಿ ಪಲ್ಟಿ
ಈ ಘಟನೆಯು ರಾಷ್ಟ್ರೀಯ ಹೆದ್ದಾರಿಯ 48ರಲ್ಲಿ ನಡೆದಿದ್ದು, ಲಾರಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆರೆಂಜ್ ಹಣ್ಣುಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಇದರಿಂದ ಕೆಲವು ಕಾಲ ಟ್ರಾಫಿಕ್ ಜಾಮ್ ಉಂಟಾಯ್ತು.

ಲಕ್ಷಾಂತರ ರೂ ಮೌಲ್ಯದ ಹಣ್ಣುಗಳು ಮಣ್ಣುಪಾಲು
ಇನ್ನು ಲಾರಿ ಪಲ್ಟಿಯಾದ ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ಹಣ್ಣುಗಳು ರಸ್ತೆಯ ಮೇಲೆ ಬಿದ್ದಿದ್ದರಿಂದ, ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಇದರಿಂದಾಗಿ ವಾಹನಗಳು ನಿಧಾನವಾಗಿ ಸಾಗುವಂತೆ ಆಗಿದ್ದು, ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯ್ತು.
ಇದನ್ನೂ ಓದಿ : Raichur ನಲ್ಲಿ ಖಾಸಗಿ ಬಸ್ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ..!!

ಇನ್ನು ವಿಷಯ ತಿಳಿದ ಕೂಡಲೇ ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಅಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು. ಲಾರಿ ಪಲ್ಟಿಯಾದ ಕಾರಣ ವಾಹನ ಸವಾರರಿಗೆ ಸುರಕ್ಷತಾ ಮಾರ್ಗದರ್ಶನ ನೀಡಲಾಗುತ್ತಿದ್ದು, ರಸ್ತೆಬದಿಯಲ್ಲಿನ ಆರೆಂಜ್ ಹಣ್ಣುಗಳನ್ನು ತೆರವುಗೊಳಿಸುವ ಕಾರ್ಯ ಪ್ರಾರಂಭಿಸಲಾಗಿದೆ.
ಸದ್ಯ ಅಪಘಾತದಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.
MUST WATCH : ಮಧುಗಿರಿಯಲ್ಲಿ ಕುರಿ ಸಂತೆಗೆ ಜಾಗ ಫಿಕ್ಸ್ ಅಧಿಕಾರಿಗಳಿಗೆ ರಾಜಣ್ಣ ಖಡಕ್ ಸೂಚನೆ




