Hosakote ಸಮೀಪ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ನಡೆದಿದೆ. Hosakote -ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ..!

ಅಪಘಾತ ಹೇಗೆ ಸಂಭವಿಸಿತು?
ಕ್ಯಾಂಟರ್, ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂದೇ ಕಾರಿನಲ್ಲಿದ್ದ 6 ಮಂದಿ ಹಾಗೂ ಓರ್ವ ಬೈಕ್ ಸವಾರ ಸೇರಿ ಒಟ್ಟು 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ XUV 700 ಕಾರು ದೇವನಹಳ್ಳಿ ಮಾರ್ಗವಾಗಿ ಬರುತ್ತಿದ್ದಾಗ ದುರ್ಘಟನೆ ನಡೆದಿದೆ.

ಸದ್ಯ ಕಾರಿನಲ್ಲಿದ್ದ 6 ಮಂದಿಯೂ ಸೇರಿದಂತೆ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮುಂದಿನ ತನಿಖೆಯನ್ನು ಆರಂಭಿಸಲಾಗಿದೆ.
MUST WATCH : ಶಾಸಕ ಭೈರತಿ ಬಸವರಾಜ್ಗೆ ಬಂಧನ ಭೀತಿ ಜೈಲು ಪಾಲಾಗ್ತಾರಾ ಬಿಜೆಪಿ ಶಾಸಕ




