ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ PUC ಪರೀಕ್ಷೆ 2026 ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ BMTC ಬಸ್ಸಿನಲ್ಲಿ ಉಚಿತ ಪ್ರಯಾಣ ಸೌಲಭ್ಯ.

2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–1 ಫೆಬ್ರವರಿ 28, 2026ರಿಂದ ಮಾರ್ಚ್ 17, 2026ರವರೆಗೆ ನಡೆಯಲಿದೆ. ವಿವಿಧ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಸುಲಭವಾಗಿ ತಲುಪಲು BMTC ಉಚಿತ ಪ್ರಯಾಣ ಸೌಲಭ್ಯ ಘೋಷಿಸಿದೆ. ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಸಾಮಾನ್ಯ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆ
ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಉಚಿತ ಪ್ರಯಾಣ ಸೌಲಭ್ಯ ಪಡೆಯಬಹುದು. ಇದರಿಂದ ವಿದ್ಯಾರ್ಥಿಗಳ ಪ್ರಯಾಣದ ತೊಂದರೆ ಕಡಿಮೆಯಾಗಲಿದೆ ಮತ್ತು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲು ಸಹಾಯಕವಾಗುತ್ತದೆ.

ಪರೀಕ್ಷಾ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತದೆ. ಅಗತ್ಯವಿದ್ದರೆ ಹೆಚ್ಚುವರಿ ಬಸ್ ಸುತ್ತುವಳಿಗಳನ್ನೂ ಸೇರಿಸಲಾಗುವುದು. ವಿದ್ಯಾರ್ಥಿಗಳು ಅಥವಾ ಪೋಷಕರು ಕೋರಿದಲ್ಲಿ ಪರೀಕ್ಷಾ ಕೇಂದ್ರಗಳ ಬಳಿ ಕೋರಿಕೆ ನಿಲುಗಡೆ (request stop) ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ.
ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ..!

ಬಿಎಂಟಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ವಿಶೇಷ ಸೌಲಭ್ಯ ಒದಗಿಸಿದ್ದು, ಪರೀಕ್ಷಾ ದಿನಗಳಲ್ಲಿ ಸುರಕ್ಷಿತ ಮತ್ತು ಸುಲಭ ಪ್ರಯಾಣಕ್ಕೆ ಆದ್ಯತೆ ನೀಡಿದೆ. ಈಗಾಗಲೇ ವಿದ್ಯಾರ್ಥಿ ಪಾಸ್ ವ್ಯವಸ್ಥೆಯೂ ಮುಂದುವರಿದಿದ್ದು, ಶಾಲೆ ಮತ್ತು ಕಾಲೇಜುಗಳಿಗೆ ಪ್ರಯಾಣ ಸುಗಮವಾಗುತ್ತಿದೆ.
MUST WATCH : ಶಾಸಕ ಭೈರತಿ ಬಸವರಾಜ್ಗೆ ಬಂಧನ ಭೀತಿ ಜೈಲು ಪಾಲಾಗ್ತಾರಾ ಬಿಜೆಪಿ ಶಾಸಕ




