Valentine’s Day (ಫೆ.14) ರಂದು ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಿರ್ಬಂಧ ಜಾರಿ..!!

ಚಿಕ್ಕಬಳ್ಳಾಪುರ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. Valentine’s Day ಹಿನ್ನೆಲೆಯಲ್ಲಿ ಹೆಚ್ಚುವರಿ ಜನಸಂದಣಿ ನಿಯಂತ್ರಿಸಲು ಹಾಗೂ ಶಾಂತಿ ಕಾಪಾಡಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ನಿರ್ಬಂಧದ ಕಾರಣವೇನು?
ಜಿಲ್ಲಾಧಿಕಾರಿ ಜಿ. ಪ್ರಭು ಅವರ ಮಾಹಿತಿ ಪ್ರಕಾರ, ಹಿಂದಿನ ವರ್ಷಗಳಲ್ಲಿ ಪ್ರೇಮಿಗಳ ದಿನದಂದು ಹೆಚ್ಚುವರಿ ಜನದಟ್ಟಣೆ ಹಾಗೂ ಆತ್ಮಹತ್ಯೆಯಂತಹ ಅವಘಡಗಳು ವರದಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ಸಾರ್ವಜನಿಕ ಸುರಕ್ಷತೆಗಾಗಿ ತಾತ್ಕಾಲಿಕ ನಿರ್ಬಂಧ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ..!

ಸಾಮಾನ್ಯ ವಾರಾಂತ್ಯಗಳಲ್ಲಿ 16,000–18,000 ಪ್ರವಾಸಿಗರು ನಂದಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ದಿನಕ್ಕೆ ಸಾವಿರಾರು ಎರಡು ಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳು ಆಗಮಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತದೆ. ಒಂದೇ ಪ್ರವೇಶ ಮಾರ್ಗ ಇರುವುದರಿಂದ ಭದ್ರತಾ ದೃಷ್ಟಿಯಿಂದ ನಿರ್ಬಂಧ ಅಗತ್ಯವಾಗಿದೆ.
MUST WATCH : ಶಾಸಕ ಭೈರತಿ ಬಸವರಾಜ್ಗೆ ಬಂಧನ ಭೀತಿ ಜೈಲು ಪಾಲಾಗ್ತಾರಾ ಬಿಜೆಪಿ ಶಾಸಕ




