
HASSAN ACCIDENT : ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಲಸಿಂದ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತರನ್ನು ಗವೀಗೌಡ (38) ಮತ್ತು ರೂಪ (35) ಎಂದು ಗುರುತಿಸಲಾಗಿದ್ದು, ಇವರು ಬೈಕ್ನಲ್ಲಿ ಚನ್ನರಾಯಪಟ್ಟಣದಿಂದ ತಮ್ಮ ಊರಾದ ಕಲಸಿಂದ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಚನ್ನರಾಯಪಟ್ಟಣದಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬಸ್ನ ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಪಘಾತದ ತೀವ್ರತೆಗೆ ದಂಪ ತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಮುಂದುವರಿಸುತ್ತಿದ್ದಾರೆ.




