Tumakuru ಹೊರವಲಯದ ಕ್ಯಾತ್ಸಂದ್ರ ಸಮೀಪ ಭೀಕರ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ…

Tumakuru ಹೊರವಲಯದ ಕ್ಯಾತ್ಸಂದ್ರ ಸಮೀಪದ ಪಂಡಿತನಹಳ್ಳಿ ಬಳಿ ಕ್ಯಾಂಟರ್, ಕಾರು ಹಾಗೂ ಬೈಕ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಬೆಳಗ್ಗೆ ನಡೆದ ಈ ದುರ್ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಸರಣಿ ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂ ಆಗಿದೆ. ಅಪಘಾತದ ದೃಶ್ಯ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : Raichur ನಲ್ಲಿ ಖಾಸಗಿ ಬಸ್ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ..!!

ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರ ಡಾಬಸ್ಪೇಟೆ ಯ ಬಿಲ್ಲಿನಕೋಟೆಯ ನಿವಾಸಿ ಇನಾಯತ್ ಎಂದು ಗುರುತಿಸಲಾಗಿದೆ.ಅವರು ಲಾರಿ ಡ್ರೈವರ್ ಆಗಿದ್ದರು.ತುಮಕೂರಿನ ಗುಬ್ಬಿಗೇಟ್ ಬಳಿ ಲಾರಿ ರಿಪೇರಿಗೆ ಬಿಟ್ಟು ಕೆಲಸಕ್ಕೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ಅಪಘಾತದ ತೀವ್ರತೆಗೆ ಇನಾಯತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ನಂತರ ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆ ಮುಂದುವರೆದಿದೆ.




