ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ America ದಲ್ಲಿ ನಾಪತ್ತೆ.

ಇತ್ತೀಚಿಗೆ ಕೆನಡಾದಲ್ಲಿ ಗುಂಡಿನ ದಾಳಿಗೆ ತುಮಕೂರು ಮೂಲದ ವ್ಯಕ್ತಿಯೊಬ್ಬ ಬಲಿಯಾಗಿದ್ದ. ಇದೀಗ ಅಮೆರಿಕಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಒಬ್ಬ ನಾಪತ್ತೆಯಾಗಿದ್ದಾನೆ.
America ದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ 22 ವರ್ಷದ ವಿದ್ಯಾರ್ಥಿ ಕಾಣೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ.
University of California, Berkeleyವಿದ್ಯಾರ್ಥಿ ಕಾಣೆ
ಸಾಕೇತ್ ಶ್ರೀನಿವಾಸಯ್ಯ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇಯಲ್ಲಿ ಮಾಸ್ಟರ್ಸ್ ವ್ಯಾಸಂಗ ಮಾಡುತ್ತಿದ್ದರು. ಅವರು ಫೆಬ್ರವರಿ 10ರಂದು Berkeleyನಗರದ ಡ್ವೈಟ್ ವೇ ಪ್ರದೇಶದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿಯನ್ನು ಪತ್ತೆಹಚ್ಚಲು ಕ್ರಮ
ಸಾಕೇತ್ ಕಾಣೆಯಾಗಿರುವ ಬಗ್ಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ದೂತಾವಾಸ ಕಚೇರಿ ಆತಂಕ ವ್ಯಕ್ತಪಡಿಸಿದೆ. ಸಾಕೇತ್ನ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು, ಸ್ಥಳೀಯ ಅಧಿಕಾರಿಗಳ ಸಹಕಾರದಿಂದ ವಿದ್ಯಾರ್ಥಿಯನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದೂತಾವಾಸ ಕಚೇರಿ ಹೇಳಿದೆ.
ಇದನ್ನು ಓದಿ : ಕೊನೆಗೂ ಕ್ಯಾಪ್ಟನ್ ಹೆಸರು ಘೋಷಿಸಿದ Rajasthan Royals! ಯಾರು ಹೊಸ ನಾಯಕ?

ಅಪಾಯದ ಸ್ಥಿತಿಯಲ್ಲಿರುವ ಸಾಕೇತ್
ಪೊಲೀಸರ ಮಾಹಿತಿ ಪ್ರಕಾರ, ಸಾಕೇತ್ ಸುಮಾರು 6 ಅಡಿ 1 ಇಂಚು ಎತ್ತರ ಹೊಂದಿದ್ದು, ಕಪ್ಪು ಕೂದಲು ಮತ್ತು ಕಂದು ಬಣ್ಣದ ಕಣ್ಣುಗಳನ್ನು ಹೊಂದಿದ್ದಾರೆ. ಸಾಕೇತ್ ಅಪಾಯದ ಸ್ಥಿತಿಯಲ್ಲಿ ಇರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದು, ಯಾರಿಗಾದರೂ ಮಾಹಿತಿ ದೊರೆತರೆ ತಕ್ಷಣ ತಿಳಿಸಲು ಬರ್ಕ್ಲೇ ನಗರದ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ತಮ್ಮ ಮಗನನ್ನು ಹುಡುಕಿ ಕೊಡಿ
ಸಾಕೇತ್ ಕೆಮಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪೂರ್ಣಗೊಳಿಸಿದ್ದು, Indian Institute of Technology Madrasನಲ್ಲಿ ಬಿ.ಟೆಕ್ ಪದವಿ ಪಡೆದಿದ್ದರು. ಪ್ರಸ್ತುತ ಅವರು ಪ್ರಾಡಕ್ಟ್ ಡೆವಲಪ್ಮೆಂಟ್ ಕಾರ್ಯಕ್ರಮದಡಿ ಯೂಸಿ ಬರ್ಕ್ಲೇಯಲ್ಲಿ ಮಾಸ್ಟರ್ ಆಫ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು. ಡೀಪ್-ಟೆಕ್, ಸೆಮಿಕಂಡಕ್ಟರ್ ಹಾಗೂ ಅಡ್ವಾನ್ಸ್ಡ್ ಮೆಟೀರಿಯಲ್ಸ್ ಕ್ಷೇತ್ರಗಳಲ್ಲಿ ಅವರಿಗೆ ವಿಶೇಷ ಆಸಕ್ತಿ ಇತ್ತು.
ನಾಪತ್ತೆಯಾಗಿರುವ ಸಾಕೇತ್ ಎಲ್ಲಿ ಹೋದ ಅಂತ ಇದುವರೆಗೂ ಗೊತ್ತಾಗುತ್ತಿಲ್ಲ ಹೀಗಾಗಿ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ತಮ್ಮ ಮಗನನ್ನು ಹುಡುಕಿ ಕೊಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.
ಇದನ್ನು ನೋಡಿ : TIPTUR | ಡಿಸಿಎಂ ಡಿಕೆಶಿ ಫುಲ್ ಟೆಂಪಲ್ ರನ್- ಇವತ್ತು ಎಲ್ಲಿ ಹೋಗಿ, ಏನನ್ನ ಬೇಡಿಕೊಂಡ್ರು..?




