Yadagiri ಜಿಲ್ಲೆಯ ಕುಟುಂಬ ಶ್ರೀಶೈಲ ದರ್ಶನಕ್ಕೆ ತೆರಳುವ ವೇಳೆ ಜಡಚರ್ಲಾ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ.

Yadagiri : ಶ್ರೀಶೈಲ ಯಾತ್ರೆಗೆ ತೆರಳುತ್ತಿದ್ದ ಕುಟುಂಬದ ಕ್ರೂಸರ್ ವಾಹನ ಭೀಕರ ಅಪಘಾತಕ್ಕೀಡಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಈ ದುರ್ಘಟನೆ ಯಾತ್ರೆಯ ವೇಳೆ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಅಪಘಾತವು ಜಡಚರ್ಲಾ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮದ ನಿವಾಸಿಗಳು ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ವಾಹನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಕುಟುಂಬಸ್ಥರು ಯಾದಗಿರಿ ನಗರದಲ್ಲಿ ಮೊಮ್ಮಗನ ಜವಳ ಮುಗಿಸಿಕೊಂಡು ಶುಕ್ರವಾರ ಯಾತ್ರೆಗೆ ಹೊರಟಿದ್ದರು. ಕ್ರೂಸರ್ ವಾಹನದಲ್ಲಿ ಸಂಚರಿಸುತ್ತಿದ್ದಾಗ ಏಕಾಏಕಿ ನಿಯಂತ್ರಣ ತಪ್ಪಿ ಭೀಕರವಾಗಿ ತಡೆಗೋಡೆಗೆ ಡಿಕ್ಕಿಯಾಗಿದೆ.
ಈ ಅಪಘಾತದಲ್ಲಿ , ರಾಮರೆಡ್ಡಿ (52) , ಅವರ ಪತ್ನಿ ಮೇಘಾ (50), ವಿಜಯಪುರ ಮೂಲದ ಮಹದೇವಪ್ಪ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಅವಘಡದಲ್ಲಿ ಐವರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವೈದ್ಯರು ಗಾಯಾಳುಗಳ ಸ್ಥಿತಿಯನ್ನು ನಿಗಾದಲ್ಲಿ ಇಟ್ಟು ಚಿಕಿತ್ಸೆ ನೀಡುತ್ತಿದ್ದಾರೆ.
ಇದನ್ನು ಓದಿ : ಜಾತ್ರೆ ವೇಳೆ Male Mahadeshwara ಬೆಟ್ಟದಲ್ಲಿ ಭೀಕರ ಅಪಘಾತ..!!

ಪ್ರಾಥಮಿಕ ತನಿಖೆ ಮತ್ತು ಶಂಕೆ
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕ ನಿದ್ದೆ ಮಂಪರಿನಲ್ಲಿ ಇದ್ದ ಕಾರಣ ವಾಹನ ನಿಯಂತ್ರಣ ತಪ್ಪಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿದಿದೆ.
ಇದನ್ನು ನೋಡಿ : TUMAKURU| ಹೆತ್ತ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಪಾಪಿ ಮಗಳು




