
KARNATAAKA RAIN : ಅಕ್ಟೋಬರ್ 1ರವರೆಗೆ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ , ಉತ್ತರ ಕನ್ನಡ, ಬಾಗಲಕೋಟೆ , ಬೆಳಗಾವಿ ,ಬೀದರ್ ,ಧಾರವಾಡ ಕಲಬುರಗಿ , ಕೊಪ್ಪಳ , ರಾಯಚೂರು , ವಿಜಯಪುರ , ಯಾದಗಿರಿ , ಬಳ್ಳಾರಿ , ಚಿಕ್ಕಮಗಳೂರು , ಶಿವಮೊಗ್ಗ , ವಿಜಯನಗರಕ್ಕೆ ಯೊಲ್ಲೋ ಅಲರ್ಟ್ ಘೊಷಿಲಾಗಿದೆ.
ಇನ್ನು ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಗದಗದಲ್ಲಿ ಮಳೆಯಾಗಲಿದೆ.
ಹವಾಮಾನ ವೈಪರೀತ್ಯದಿಂದಾಗಿ ಜನತೆ ಎಚ್ಚರಿಕೆಯಿಂದ ಇರುವುದು ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ.




