ರಾಜ್ಯದಲ್ಲಿ ಇತ್ತೀಚೆಗೆ ಸಿಲಿಂಡರ್ ಸ್ಫೋಟ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ Bengaluru ನಗರದಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ ಪ್ರಕರಣ ನಡೆದಿದೆ.

ರಾಮಮೂರ್ತಿ ನಗರದ ಬಳಿಕ ಬೆಂಗಳೂರಿನ (Bengaluru) ಮತ್ತೊಂದು ಸ್ಥಳದಲ್ಲಿ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ.ಇಲ್ಲಿನ ರಾಮಮೂರ್ತಿ ನಗರದಲ್ಲಿ ಇತ್ತೀಚೆಗಷ್ಟೇ ಸಿಲಿಂಡರ್ ಸ್ಫೋಟಗೊಂಡು ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಯಲಹಂಕದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಬಾಗೇಪಲ್ಲಿ ಮೂಲದ ದಂಪತಿಗಳಿಬ್ಬರು ಗಾಯಗೊಂಡಿದ್ದಾರೆ. ಕೃಷ್ಣಮ್ಮ-ರಾಜು ಗಾಯಗೊಂಡ ಪತಿ ಪತ್ನಿ.
ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ
ಇಂದು ಬೆಳಗ್ಗೆ ಸುಮಾರು 6 ಗಂಟೆ ವೇಳೆಗೆ ಮನೆಯೊಳಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟ ಹೇಗೆ ಸಂಭವಿಸಿತು ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಆದರೆ ಗ್ಯಾಸ್ ಹಚ್ಚುವಾಗ ಅಥವಾ ವಿದ್ಯುತ್ ಸ್ವಿಚ್ ಆನ್ ಮಾಡುವಾಗ ಸೋರಿಕೆಯಾದ ಅನಿಲಕ್ಕೆ ಬೆಂಕಿ ತಗುಲಿ ಸ್ಫೋಟ ಸಂಭವಿಸಿರಬಹುದು ಎಂದು ಹೇಳುತ್ತಿದ್ದಾರೆ.
ಇದನ್ನು ಓದಿ : ಡಿವೈಡರ್ ಹಾರಿ ಬಸ್ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

ಮನೆ ಗೋಡೆ ಛಿದ್ರ ಛಿದ್ರ
ಸ್ಪೋಟದ ತೀವ್ರತೆಗೆ ಮನೆಗೋಡೆಯ ಒಂದು ಭಾಗವೇ ಛಿದ್ರವಾಗಿದೆ. ಬಳಿಕ ಘಟನೆಯಲ್ಲಿ ಗಾಯಗೊಂಡಿದ್ದ ಕೃಷ್ಣಮ್ಮ-ರಾಜು ದಂಪತಿಯನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಬಾಗೇಪಲ್ಲಿ ಕೃಷ್ಣಮ್ಮ-ರಾಜು ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಇನ್ನು ಘಟನಾ ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ್ದಾರೆ.

ಇದನ್ನು ನೋಡಿ : TUMAKURU | ರಸ್ತೆಯಲ್ಲೇ ಕಸ ಚೆಲ್ಲಿಕೊಂಡು ಹೋದ ಲಾರಿ ಬರೋಬ್ಬರಿ 5 ಸಾವಿರ ದಂಡ ಹಾಕಿದ ಪಾಲಿಕೆ




