ಟಿ20 ವಿಶ್ವಕಪ್ನ ಹೈವೋಲ್ಟೇಜ್ IND vs PAK ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.

IND vs PAK : ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಟಿ20 ವಿಶ್ವಕಪ್ನ ಹೈವೋಲ್ಟೇಜ್ ಭಾರತ–ಪಾಕಿಸ್ತಾನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ ಈ ಮಹತ್ವದ ಪಂದ್ಯಕ್ಕೆ ಮಳೆ ಭೀತಿ ಕಾಡುತ್ತಿದೆ.
ಹವಾಮಾನ ಇಲಾಖೆ ಪ್ರಕಾರ, ಪಂದ್ಯ ದಿನ ಸಂಜೆ ಶೇ.50ರಿಂದ 70ರಷ್ಟು ಮಳೆಯ ಸಾಧ್ಯತೆ ಇದೆ. ಒಂದೊಮ್ಮೆ ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗುತ್ತದೆ.
ಪಿಚ್ ಸ್ಪಿನ್ನರ್ಗಳಿಗೆ ನೆರವಾಗುವ ನಿರೀಕ್ಷೆ
ಕೊಲಂಬೊ ಪಿಚ್ ಸ್ಪಿನ್ನರ್ಗಳಿಗೆ ನೆರವಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಭಾರತ ಹೆಚ್ಚುವರಿ ಸ್ಪಿನ್ನರ್ಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ.
ಅಂತಹ ಪರಿಸ್ಥಿತಿ ಬಂದರೆ Kuldeep Yadav ಅವರಿಗೆ ಅವಕಾಶ ಸಿಗಬಹುದು. ಕುಲ್ದೀಪ್ ಆಡಿದರೆ Rinku Singh ಹೊರಗುಳಿಯುವ ಸಾಧ್ಯತೆ ಇದೆ.
ಈ ಬಾರಿ ಟಿ20 ವಿಶ್ವಕಪ್ನಲ್ಲಿ ಇಲ್ಲಿ ನಡೆದ 3 ಪಂದ್ಯಗಳಲ್ಲಿ ಮೊದಲ ಇನ್ನಿಂಗ್ಸ್ ಸರಾಸರಿ ಮೊತ್ತ 171. ಈ 3 ಪಂದ್ಯಗಳಲ್ಲೂ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ. ಹೀಗಾಗಿ ಟಾಸ್ ಗೆಲ್ಲುವ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಬಹುದು.

ಇದನ್ನು ಓದಿ : Photoshoot ವೇಳೆ ನೀರಿನ ತೊಟ್ಟಿಗೆ ಬಿದ್ದು ಮಗು ಸಾವು.!
ಪಾಕಿಸ್ತಾನದ ಸವಾಲು
ವಿಶಿಷ್ಟ ಬೌಲಿಂಗ್ ಶೈಲಿ ಮೂಲಕ ಸಾಕಷ್ಟು ಟೀಕೆಗೂ ಗುರಿಯಾಗಿರುವ ಉಸ್ಮಾನ್ ತಾರೀಖ್, ಭಾರತೀಯರನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಯುತ್ತಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಫರ್ಹಾನ್, ಸೈಮ್ ಅಯೂಬ್, ನಾಯಕ ಸಲ್ಮಾನ್ ಅಘಾ, ಬಾಬರ್ ಅಜಂ ಇದ್ದಾರೆ. ಆದರೆ ಇವರಿಂದ ನಿರೀಕ್ಷಿತ ಬ್ಯಾಟಿಂಗ್ ಇದುವರೆಗೂ ಕಂಡುಬಂದಿಲ್ಲ.
ಸಂಭವನೀಯ ಆಟಗಾರರ ಪಟ್ಟಿ
ಭಾರತ: ಇಶಾನ್ ಕಿಶನ್, ಅಭಿಷೇಕ್ ಶರ್ಮ, ತಿಲಕ್ ವರ್ಮ, ಸೂರ್ಯಕುಮಾರ್ ಯಾದವ್(ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು/ ಕುಲ್ದೀಪ್, ಅಕ್ಷರ್ ಪಟೇಲ್, ಅರ್ಶ್ದೀಪ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ: ಫರ್ಹಾನ್, ಸೈಮ್, ಸಲ್ಮಾನ್(ನಾಯಕ), ಬಾಬರ್ ಆಜಂ, ಶದಾಬ್, ಉಸ್ಮಾನ್ ಖಾನ್/ಜಮಾನ್, ನವಾಜ್, ಫಹೀಂ ಅಶ್ರಫ್, ಶಾಹೀನ್, ತಾರಿಖ್, ಅಬ್ರಾರ್.

ಪಂದ್ಯ ಆರಂಭ : ಸಂಜೆ 7 ಗಂಟೆಗೆ
ನೇರಪ್ರಸಾರ : ಸ್ಟಾರ್ಸ್ಪೋರ್ಟ್ಸ್, ಜಿಯೋ ಹಾಟ್ಸ್ಟಾರ್

ಇದನ್ನು ನೋಡಿ : ಹೋಟೆಲ್, ಅಂಗಡಿಗಳ ಮೇಲೆ ಭರ್ಜರಿ ರೇಡ್ ಎರಡು ಅಂಗಡಿಗಳಿಗೆ ಬಿತ್ತು ಬೀಗ




