Mandya ದಲ್ಲಿ ಕಾರ್ಖಾನೆ ಸ್ಥಳಾಂತರ ವೇಳೆ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು!

ಕಾರ್ಖಾನೆ ಸ್ಥಳಾಂತರ ಮಾಡುವಾಗ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತಿಬ್ಬರು ಅಸ್ವಸ್ಥಗೊಂಡಿರುವ ಘಟನೆ Mandya ದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ.

ಇದನ್ನು ಓದಿ : ಮದುವೆಗೆ ಹೋಗಿ ನಾಪತ್ತೆಯಾಗಿದ್ದ ಮಹಿಳೆ ಕೇಸ್ಗೆ ಬಿಗ್ ಟ್ವಿಸ್ಟ್.!?
ರಾಸಾಯನಿಕ ಟ್ಯಾಂಕ್ ತೆರವು ಮಾಡುವ ವೇಳೆ ದುರಂತ
ಬಸರಾಳು ಸಮೀಪದ ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡಲಾಗುತ್ತಿತ್ತು. ಬಿಹಾರ ಮೂಲದ ಕಾರ್ಮಿಕರಿಂದ ಕಾರ್ಖಾನೆ ಸ್ಥಳಾಂತರ ಮಾಡುವ ವೇಳೆ ದುರಂತ ಸಂಭವಿಸಿದೆ.
ಕಳೆದ ಒಂದು ತಿಂಗಳಿಂದ ಕಾರ್ಖಾನೆಯನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದ್ದು, ಇಂದು ರಾಸಾಯನಿಕ ಟ್ಯಾಂಕ್ ತೆರವು ಮಾಡುವ ವೇಳೆ ಸ್ಫೋಟ ಸಂಭವಿಸಿದೆ. ಇನ್ನು ಸ್ಪೋಟದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ವಸ್ಥಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ವಿರೋಧ ವ್ಯಕ್ತ – Mandya
ಇದೇ ಕಾರ್ಖಾನೆಯಲ್ಲಿ 4 ವರ್ಷದ ಹಿಂದೆಯೂಅವಘಡ ಸಂಭವಿಸಿತ್ತು. ಈ ವೇಳೆ ರಾಸಾಯನಿಕ ಸೋರಿಕೆಯಾಗಿ ನೂರಾರು ಎಕರೆ ಬೆಳೆ ಹಾನಿಯಾಗಿತ್ತು. ಎರಡು ನಾಯಿಗಳು ಮೃತಪಟ್ಟಿದ್ದವು. ಆ ವೇಳೆ ಅದೃಷ್ಟವಶಾತ್ ಜನರ ಪ್ರಾಣ ಹಾನಿಯಾಗಿರಲ್ಲ. ಬಳಿಕ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.
ಇದನ್ನು ನೋಡಿ : ಇದು ಪ್ರಜಾಶಕ್ತಿ ಟಿವಿಯ ಇಂಪ್ಯಾಕ್ಟ್ ಒಂದೇ ವರದಿಗೆ ಫುಲ್ ಕ್ಲೀನ್..ಕ್ಲೀನ್




