ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್ 7 ದಿನ CBI ಕಸ್ಟಡಿಗೆ.

ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ತಮಗೆ ಹೃದಯ ಸಂಬಂಧಿ ಸಮಸ್ಯೆ ಇದೆ ಎಂದು ತಿಳಿಸಿದ್ದು, ಈ ಹಿನ್ನೆಲೆ 2 ದಿನಗಳಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಹಾಗೂ ಪರೀಕ್ಷೆ ನಡೆಸಲಾಗಿತ್ತು.
ಇದೀಗ ಬೆಂಗಳೂರಿನ ಜಯದೇವ ಆಸ್ಪತ್ರೆಯ ವೈದ್ಯರು ವರದಿಯನ್ನು ನೀಡಿದ್ದು, ಬೈರತಿ ಅವರ ಆರೋಗ್ಯ ಸರಿಯಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಈ ಕುರಿತು ತೀರ್ಪು ನೀಡಿದ್ದು ಬೈರತಿ ಬಸವರಾಜ್ ಅವರನ್ನು 7 ದಿನಗಳ CID ಕಸ್ಟಡಿಗೆ ನೀಡಲು ಆದೇಶಿಸಿದೆ.
ಇದನ್ನು ಓದಿ : ಕಾರ್ಖಾನೆ ಸ್ಥಳಾಂತರದ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟ – ಇಬ್ಬರು ಕಾರ್ಮಿಕರು ಸಾವು

Byrati Basavaraj 7 ದಿನ CBI ಕಸ್ಟಡಿಗೆ
Byrati Basavaraj ಅವರನ್ನು ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಶಾಸಕರ ಆಂಜಿಯೋಗ್ರಾಮ್ ರಿಪೋರ್ಟ್ನ್ನು ನ್ಯಾಯಾಧೀಶರಿಗೆ ತನಿಖಾಧಿಕಾರಿ ಡಿವೈಎಸ್ಪಿ ಗೌತಮ್ ಸಲ್ಲಿಸಿದರು. ವರದಿಯನ್ನು ಪರಿಶೀಲಿಸಿ, ವಿಚಾರಣೆ ನಡೆಸಿದ ನ್ಯಾಯಾಧೀಶರು, ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.
ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ಸಂಕಷ್ಟ
ಫೆ.12 ರಂದು ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದ ಬೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು. ಮರುದಿನ ಆರೋಗ್ಯ ತಪಾಸಣೆ ನಡೆಸಿದ್ದ ವೇಳೆ ಅವರಿಗೆ ಇಸಿಜಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರಿಗೆ ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್ ಮಾಡಿಸಲಾಗಿತ್ತು.

ಇದನ್ನು ನೋಡಿ : HASSAN WOMEN MISSING CASE | ಮದುವೆಗೆ ಹೋಗಿದ್ದವಳು ಪ್ರಿಯಕರನ ಜೊತೆ ಜೂಟ್




