
DODDABALLAPURA : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಬಳಿ ಭೀಕರ ಹತ್ಯೆ ನಡೆದಿದೆ. ತಲೆಯ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ರಘು ಅಲಿಯಾಸ್ ಬುಲೆಟ್ ರಘು (ವಯಸ್ಸು 38) ಎಂಬುವವರನ್ನು ಕೊಲೆ ಮಾಡಲಾಗಿದೆ.
ಇನ್ನು ಮಧ್ಯರಸ್ತೆಯಲ್ಲೇ ಈ ಭೀಕರ ಕೊಲೆ ನಡೆದಿದ್ದು, ಇದರಿಂದ ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಈ ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.
ಇನ್ನು ಘಟನಾ ಸ್ಥಳಕ್ಕೆ ಎಎಸ್ಪಿ ನಾಗರಾಜ್ ಹಾಗೂ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




