Chikkamagaluru : ಕಾಡಾನೆ ದಾಳಿಗೆ ಹಾವೇರಿ ಮೂಲದ ಕಾರ್ಮಿಕ ಬಲಿ.

Chikkamagaluru ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗ್ತಿದ್ದು ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದ ದಾರುಣ ಘಟನೆ ಜಿಲ್ಲೆಯ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ.
ಕಾಡಾನೆ ದಾಳಿಗೆ ಕಾರ್ಮಿಕ ಬಲಿ
ಮೃತ ದುರ್ದೈವಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿರುವಳ್ಳಿ ಮೂಲದ ಯಲ್ಲಪ್ಪ (45) ಎಂದು ಗುರುತಿಸಲಾಗಿದೆ. ಯಲ್ಲಪ್ಪ, ನಾಗೇಶ್ ಗೌಡ ಎಂಬವರ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಸ್ಥಳದಲ್ಲೇ ಅವರು ಸಾವಿಗೀಡಾಗಿದ್ದಾರೆ.
ಇದನ್ನು ಓದಿ : ಪ್ರಯಾಣಿಕರಿಗೆ ಶಾಕ್ ಕೊಟ್ಟ KSRTC – ಇಂದಿನಿಂದ ನೂತನ ಪರಿಷ್ಕ್ರತ ದರ ಜಾರಿಗೆ

ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ
ಇನ್ನು ಮೃತ ಯಲ್ಲಪ್ಪ ಅವರು ಕೂಲಿ ಕೆಲಸ ಹಾಗೂ ಗಾರೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ರಕ್ಷಣೆ ನೀಡಬೇಕೆಂದು ಆಗ್ರಹ – Chikkamagaluru
ಇನ್ನು ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗಿದ್ದು, ಸ್ಥಳೀಯರು ಮತ್ತು ಕಾರ್ಮಿಕರು ತೋಟಗಳಲ್ಲಿ ಕೆಲಸ ಮಾಡಲು ಹಾಗೂ ಓಡಾಡಲು ಭಯ ಪಡುವಂತಾಗಿದೆ. ಅರಣ್ಯ ಇಲಾಖೆ ಕೂಡಲೇ ಪುಂಡಾನೆಗಳನ್ನು ನಿಯಂತ್ರಿಸಿ ಸೂಕ್ತ ರಕ್ಷಣೆ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನು ನೋಡಿ : ಸಿಲ್ಲಿ ಮ್ಯಾಟರ್ಗೆ ದೊಣ್ಣೆ, ಗುದ್ದಲಿ ತಂದ್ರು- ನೋಡ್ತಾ ನೋಡ್ತಾ ಇದ್ದಂತೆ ರಕ್ತ ಸುರಿಸೇ ಬಿಟ್ರು..!




