Bengaluru ನಲ್ಲಿ ಇಂದಿರಾನಗರದಲ್ಲಿ ಆಸ್ತಿ ವಿಚಾರದ ಗಲಾಟೆ ತೀವ್ರಗೊಂಡು ವೃದ್ಧ ತಂದೆಯನ್ನು ಮಗನೇ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

Bengaluru ನಗರದಲ್ಲಿ ಆಸ್ತಿ ವಿವಾದ ಹಿನ್ನೆಲೆ ವೃದ್ಧ ತಂದೆಯನ್ನು ಮಗನೇ ಇರಿದು ಕೊಂದ ಹೃದಯವಿದ್ರಾವಕ ಘಟನೆ ನಡೆದಿದೆ. ಈ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ನಗರದಲ್ಲಿ ಆತಂಕ ಮೂಡಿಸಿದೆ.
ಮೃತರನ್ನು ಮುನಿಕೃಷ್ಣ (70) ಎಂದು ಗುರುತಿಸಲಾಗಿದೆ. ಆರೋಪಿ ಮಗ ಮೋಹನ್ ಕುಮಾರ್ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬದ ಆಸ್ತಿ ವಿಚಾರವಾಗಿ ಈ ಹಿಂದೆ ಹಲವು ಬಾರಿ ತಂದೆ-ಮಕ್ಕಳ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ.

ಇತ್ತೀಚೆಗೆ, ಆಸ್ತಿ ವಿಚಾರವಾಗಿ ಉದ್ಭವಿಸಿದ ವಾಗ್ವಾದ ಹಲ್ಲೆಗೆ ತಿರುಗಿತ್ತು. ಎರಡು ದಿನಗಳ ಹಿಂದೆ ಆರೋಪಿ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡ ಮುನಿಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಇದನ್ನು ಓದಿ : ಹಲವು ಕೋರ್ಟ್ಗಳಿಗೆ Bomb Threat – ಬಾಂಬ್ ಸ್ಫೋಟಿಸುವುದಾಗಿ ಸಂದೇಶ
ಆಸ್ತಿ ವಿವಾದವೇ ಹತ್ಯೆಗೆ ಕಾರಣ?
ಮುನಿಕೃಷ್ಣ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ನಿವೃತ್ತ ಕಂಡಕ್ಟರ್ ಆಗಿದ್ದು, ಕೋಟ್ಯಂತರ ರೂ. ಮೌಲ್ಯದ ಆಸ್ತಿ ಹೊಂದಿದ್ದರು. ಕೆಲವು ಆಸ್ತಿಯನ್ನು ಮೊಮ್ಮಕ್ಕಳ ಹೆಸರಿಗೆ ವಿಲ್ ಮಾಡಿದ್ದರಿಂದ ಕುಟುಂಬದಲ್ಲಿ ಅಸಮಾಧಾನ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಇದೇ ಆಸ್ತಿ ವಿವಾದವೇ ಕೊಲೆಗೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ.

ಪೊಲೀಸ್ ಕ್ರಮ
ಘಟನೆಗೆ ಸಂಬಂಧಿಸಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : NATIONAL CRUSHಗೆ ಮದುವೆ ಸಂಭ್ರಮ ಯಾವಾಗ ಮದುವೆ.. ಹೇಗಿದೆ ಪ್ರಿಪರೇಷನ್




