Suicide : ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಅನುಮಾನಾಸ್ಪದ ಸಾವು.

ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ದುರ್ಘಟನೆ Doddaballapura ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು ಸರ್ಜಾಪುರ ಮೂಲದ ನಯನಾ (20) ಮೃತಪಟ್ಟಿರುವ ದುರ್ದೈವಿ. ಕಾಲೇಜು ಹಾಸ್ಟೆಲ್ನ 14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯನಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ವ್ಯಾಸಂಗ ಮಾಡುತ್ತಿದ್ದಳು.
ಇದನ್ನು ಓದಿ : ಖ್ಯಾತ ರಿಯಾಲಿಟಿ ಶೋ ಸ್ಪರ್ಧಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್..!

14ನೇ ಮಹಡಿಯಿಂದ ಬಿದ್ದು ಸಾವು
14ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದು, Suicide ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ.

ಇದನ್ನು ನೋಡಿ : ನಟ ಯಶ್ ತಾಯಿಗೆ ಮೊದಲ ಜಯ ಜಾಗದ ವಿಚಾರಕ್ಕೆ ಸ್ಟೇ ಕೊಟ್ಟ ಕೋರ್ಟ್




