Kalaburagi : ಬಬಲಾದ ಗ್ರಾಮದ ಶಾಲಾ ಆವರಣದ ಬಾವಿಯಲ್ಲಿ 15 ವರ್ಷದ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.

Kalaburagi ಜಿಲ್ಲೆಯ ಬಬಲಾದ ಗ್ರಾಮದ ಶಾಲಾ ಆವರಣದ ಬಾವಿಯಲ್ಲಿ 15 ವರ್ಷದ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಈ ಘಟನೆ ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.
ಮೃತ ವಿದ್ಯಾರ್ಥಿಯನ್ನು ಗುರು (15) ಎಂದು ಗುರುತಿಸಲಾಗಿದೆ. ಅವರು ಚಿಂಚೋಳಿ ತಾಲೂಕು ನಿವಾಸಿಯಾಗಿದ್ದು, ವಸತಿ ನಿಲಯದಲ್ಲಿ ವಾಸವಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದರು. ಕಳೆದ ಮೂರು ದಿನಗಳಿಂದ ಅವರು ಶಾಲೆಯಿಂದ ನಾಪತ್ತೆಯಾಗಿದ್ದರು.
ಬಾವಿಯಲ್ಲಿ ಶವ ಪತ್ತೆ
ಮಂಗಳವಾರ ಬೆಳಗ್ಗೆ ಶಾಲಾ ಆವರಣದಲ್ಲಿರುವ ಬಾವಿಯಲ್ಲಿ ಗುರುನ ಶವ ಪತ್ತೆಯಾಗಿದೆ. ಮಾಹಿತಿ ತಿಳಿದು ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ನ್ಯಾಷನಲ್ ಕ್ರಶ್ಗೆ ಮದುವೆ ಸಂಭ್ರಮ – ಯಾವಾಗ ಮದುವೆ..?
ಎರಡು ದಿನಗಳ ಹಿಂದೆ ಶಾಲೆಯ ಬೈಕ್ ತೆಗೆದುಕೊಂಡು ಹೋಗಿ ಗೋಡೆಗೆ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಹಾನಿಗೊಳಗಾಗಿತ್ತು ಎಂದು ತಿಳಿದುಬಂದಿದೆ. ಈ ವಿಷಯವನ್ನು ಸಿಬ್ಬಂದಿ ಪ್ರಿನ್ಸಿಪಾಲ್ ಗಮನಕ್ಕೆ ತಂದಿದ್ದರು.
ಬೈಕ್ ರಿಪೇರಿ ವೆಚ್ಚವನ್ನು ಕುಟುಂಬದಿಂದ ಭರಿಸಲು ಸೂಚಿಸಿದ್ದರೆಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಈ ಘಟನೆ ಕಲಬುರಗಿ ಸಬ್-ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
MUST WATCH : NATIONAL CRUSHಗೆ ಮದುವೆ ಸಂಭ್ರಮ ಯಾವಾಗ ಮದುವೆ.. ಹೇಗಿದೆ ಪ್ರಿಪರೇಷನ್




