Pavagada ತಾಲೂಕಿನ ಬಳಿ ಎಟಿಎಂ ಹಣ ಸಾಗಿಸುವ ವ್ಯಾನ್ ಪಲ್ಟಿಯಾಗಿ ಬ್ಯಾಂಕ್ ಸಿಬ್ಬಂದಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ….

Pavagada: ಎಟಿಎಂ ಹಣ ಸಾಗಿಸುವ ವ್ಯಾನ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ ಘಟನೆ ಪಾವಗಡ ತಾಲೂಕಿನ ದೊಮ್ಮತುಮರಿ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಬ್ಯಾಂಕ್ ಸಿಬ್ಬಂದಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ಚಂದನ್ ಎಂದು ಗುರುತಿಸಲಾಗಿದೆ.
ದೊಮ್ಮತುಮರಿ ಗ್ರಾಮದ ಎಟಿಎಂನಲ್ಲಿ ಹಣ ಡೆಪಾಸಿಟ್ ಮಾಡಿ ಹಿಂತಿರುಗುತ್ತಿದ್ದ ವೇಳೆ ವ್ಯಾನ್ ಅಪಘಾತಕ್ಕೀಡಾಗಿದೆ. ಮುರಾರಾಯನಪಳ್ಳಿ ಕೆರೆಯ ಕಟ್ಟೆ ತಿರುವಿನಲ್ಲಿ ಎದುರುಗಡೆಯಿಂದ ಬರುತ್ತಿದ್ದ ವಾಹನವನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ನಿಯಂತ್ರಣ ತಪ್ಪಿ ವ್ಯಾನ್ ಪಲ್ಟಿಯಾಗಿದೆ. ಪರಿಣಾಮವಾಗಿ ಈ ಭೀಕರ ಅಪಘಾತ ಸಂಭವಿಸಿದೆ.
ಇದನ್ನು ಓದಿ : ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

ಗಾಯಾಳುಗಳಿಗೆ ಚಿಕಿತ್ಸೆ
ವ್ಯಾನ್ನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪೊಲೀಸ್ ಪರಿಶೀಲನೆ ಮತ್ತು ತನಿಖೆ
ಘಟನೆ ಸಂಬಂಧ ಪಾವಗಡ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : TUMAKURU ಗುಳೂರು ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿ ಬೆರಳು ಕಟ್ ಆಗಿದ್ದ ಕೇಸ್- ವರದಿ ಬೆನ್ನಲ್ಲೇ ದಾಖಲಾಯ್ತು FIR




