ಹುಟ್ಟುಹಬ್ಬದ ದಿನದಂದೇ Darshan ಪರ ವಕೀಲರು ಕೋರ್ಟ್ಗೆ ಮಹತ್ವದ ಅರ್ಜಿ ಸಲ್ಲಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದ 2ನೇ ಆರೋಪಿ (A2) ನಟ ದರ್ಶನ್ ತೂಗುದೀಪ್ ಜೈಲು ಪಾಲಾಗಿದ್ದು, ಅಲ್ಲಿಂದ ಹೊರ ಬರಲು ಪರದಾಡುತ್ತಿದ್ದಾರೆ. ಇದೀಗ ತಮ್ಮ ಹುಟ್ಟುಹಬ್ಬದ ದಿನದಂದೇ ದರ್ಶನ್ ಪರ ವಕೀಲರು ಕೋರ್ಟ್ಗೆ ಮಹತ್ವದ ಅರ್ಜಿ ಸಲ್ಲಿಸಿದ್ದು, ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಮನವಿ ಮಾಡಿದ್ದಾರೆ
‘ಡೇ ಟು ಡೇ’ ವಿಚಾರಣೆಗೆ
ಪ್ರಕರಣದ ವಿಚಾರಣೆ ನಡೆಯುತ್ತಿರುವ 57ನೇ ಸೆಷನ್ಸ್ ಕೋರ್ಟ್ಗೆ ದರ್ಶನ್ ಪರ ವಕೀಲರು CrPC Section 309 ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಟ್ರಯಲ್ ಪ್ರಕ್ರಿಯೆಯನ್ನು ವಿಳಂಬ ಮಾಡದೇ, ಪ್ರತಿದಿನವೂ (‘ಡೇ ಟು ಡೇ’ ಆಧಾರದ ಮೇಲೆ) ವಿಚಾರಣೆ ನಡೆಸುವಂತೆ ಮನವಿ ಮಾಡಲಾಗಿದೆ.
ಇದನ್ನು ಓದಿ : ನಾಳೆ ರಾಜ್ಯಾದ್ಯಂತ KSRTC ಸೇರಿ 4 ನಿಗಮದ ಸಾರಿಗೆ ನೌಕರರ ಪ್ರತಿಭಟನೆ – ಬಸ್ ಸಂಚಾರ ಇರುತ್ತಾ?

ಜೈಲು ಸೇರಿ 6 ತಿಂಗಳು – ಜಾಮೀನಿನ ಲೆಕ್ಕಾಚಾರ
2025ರ ಆಗಸ್ಟ್ 14ರಂದು ಜಾಮೀನು ರದ್ದುಗೊಂಡ ನಂತರ Darshan ಸೇರಿದಂತೆ ಪ್ರಮುಖ ಆರೋಪಿಗಳು ಜೈಲು ಸೇರಿದ್ದರು. ಇದೀಗ ಆರು ತಿಂಗಳು ಪೂರೈಸಿರುವ ಹಿನ್ನೆಲೆ, ಪ್ರಕರಣದ ವಿಚಾರಣೆ ವೇಗವಾಗಿ ನಡೆದರೆ ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿಸಿ ಮತ್ತೆ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಸಿಗಬಹುದು ಎಂಬ ಲೆಕ್ಕಾಚಾರದಲ್ಲಿ ಕಾನೂನು ತಂಡ ಹೊಸ ತಂತ್ರ ರೂಪಿಸಿದೆ ಎನ್ನಲಾಗಿದೆ.
ಪ್ರಾಸಿಕ್ಯೂಷನ್ ಆಕ್ಷೇಪಣೆ ಸಾಧ್ಯತೆ – Darshan
ಈ ಅರ್ಜಿಗೆ ಪ್ರಾಸಿಕ್ಯೂಷನ್ (ಪೊಲೀಸ್ ಪರ ವಕೀಲರು) ಪ್ರಬಲ ಆಕ್ಷೇಪಣೆ ಸಲ್ಲಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. ಈಗಾಗಲೇ ಟ್ರಯಲ್ ಆರಂಭವಾಗಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಕೋರ್ಟ್ ಈ ಅರ್ಜಿಯ ಕುರಿತು ಕೈಗೊಳ್ಳುವ ನಿರ್ಧಾರ ಪ್ರಕರಣದ ಮುಂದಿನ ದಿಕ್ಕು ನಿರ್ಧರಿಸಲಿದೆ.

ಒಟ್ಟಿನಲ್ಲಿ, ಜೈಲಿನಲ್ಲಿ ಆರು ತಿಂಗಳು ಕಳೆದ ನಂತರ ನಟ ದರ್ಶನ್ ಬಿಡುಗಡೆಗಾಗಿ ಕಾನೂನು ಹೋರಾಟದ ವೇಗ ಹೆಚ್ಚಿಸಿರುವುದು ಸ್ಪಷ್ಟವಾಗಿದೆ.
ಇದನ್ನು ನೋಡಿ : ಕರೆಂಟ್ ತಗುಲಿ ಲೈನ್ ಮ್ಯಾನ್ ಸಾವು ಬೆಸ್ಕಾಂ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ ಬೇಕು





